ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ

ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬಿಡುವುದಿಲ್ಲ. ಇದು ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪುಂಡಾಟಿಕೆ ಹತ್ತಿಕ್ಕುವ ಜೊತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ತಪ್ಪಿತಸ್ಥರಿಗೆ ಭಯ ಹುಟ್ಟಿಸಲಾಗುವುದು ಎಂದು ಗುಡುಗಿದ್ದಾರೆ.ಬೆಳಗಾವಿಯ ಶಿವಾಜಿ ಗಾರ್ಡನ್ ನಲ್ಲಿರುವ ಶಿವಾಜಿ ಪುತ್ಥಳಿ ಬಳಿ ಯಾರೂ ಸುಳಿಯದಂತೆ ಡಿಸಿಪಿ ಸ್ನೇಹಾ ಸೂಚಿಸಿದ್ದಾರೆ. 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಜನ ಸೇರುವಂತಿಲ್ಲ ಎಂದು ತಿಳಿಸಿದ್ದಾರೆ.ಎಂಇಎಸ್ ಮುಖಂಡ ಶುಭಂ ಶಳಕೆ ಸೇರಿದಂತೆ 27 ಮಂದಿಯನ್ನು ಬಂಧಿಸಲಾಗಿದೆ. ಹಿಂದೂಸ್ಥಾನ್ ಶ್ರೀರಾಮಸೇನೆಯ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ್ ಸೇರಿ ಹಲವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ನಿನ್ನೆ ರಾತ್ರಿ ಅಟ್ಟಹಾಸಗೈದ ಕಿಡಿಗೇಡಿಗಳು ಪುಂಡಾಟಿಕೆ ಮೆರೆದಿದ್ದರು. ಬೆಳಗಾವಿ ಪೋಲಿಸ್ ಆಯುಕ್ತ ಕೆ. ತ್ಯಾಗರಾಜನ್ 27 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬೆಳಗಾವಿಯ ಮೂರು ಪೊಲೀಸ್ ಠಾಣೆಗಳಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ, ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು. ಕಾನೂನು ಸುವ್ಯವಸ್ಥೆ ಹಾಳು ಮಾಡುವುದು, ಭಾಷಾ ವೈಷಮ್ಯ ಮೂಡಿಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಕೇಸು ದಾಖಲಿಸಲಾಗಿದೆ. 100ಕ್ಕೂ ಹೆಚ್ಚು ಜನರ ವಿರುದ್ಧ ಮೂರು ಠಾಣೆಗಳಲ್ಲಿ ದೂರು ದಾಖಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡರೂ ಒಮಿಕ್ರಾನ್  ಸೋಂಕು ಪತ್ತೆ

Sat Dec 18 , 2021
ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಪ್ರ ಕಟಣೆಯಲ್ಲಿ ತಿಳಿಸಿದೆ.ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ […]

Advertisement

Wordpress Social Share Plugin powered by Ultimatelysocial