ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆ ಪ್ರಾರಂಭ : ಸಿಎಂ ಬೊಮ್ಮಾಯಿ

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.ಅಲ್ಲಿಯವರೆಗೂ ಅತಿಥಿ ಶಿಕ್ಷಕರ ಮೂಲಕ ಶಾಲೆಗಳನ್ನು ನಡೆಸಲಾಗುವುದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈತರ ಪರಿಹಾರ ಹಣವನ್ನು ನೇರವಾಗಿ ರೈತರಿಗೆ ಮುಟ್ಟಿಸಿ: ಸೋಮಣ್ಣ ಬೆಟಗೇರಿ ರೈತ ಮುಖಂಡ ಅಗ್ರಹ

Thu Dec 23 , 2021
ಲಕ್ಷ್ಮೇಶ್ವರ: ರೈತರಿಗಾಗಿ ಸರಕಾರದಿಂದ ಬಂದ ಪರಿಹಾರ ಹಣವನ್ನುರೈತರಿಗೆ ನೇರವಾಗಿ ಸಿಗಬೇಕು ಎಂದು ರಾಮಗೇರಿ ಗ್ರಾಮದ ರೈತರಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅನೂಪ ಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ಬಸವರಾಜ, ಎಮ್, ಕಾತ್ರಾಳ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸೋಮಣ್ಣ ಬೆಟಗೇರಿ ಸರ್ಕಾರದಿಂದ ಬಂದಂತಹ ಪರಿಹಾರವಾದ ಬೆಳೆ ಹಾನಿ, ಮಳೆಯ ಅತಿವೃಷ್ಠಿಗೆ ಮನೆ ಬಿದ್ದ ಪರಿಹಾರ, ಹಾಗೂ ರೈತರಗೆ ದೊರಕಿರುವ ಅನೇಕ ಪರಿಹಾರದ ಹಣವನ್ನು ಬ್ಯಾಂಕ್ […]

Advertisement

Wordpress Social Share Plugin powered by Ultimatelysocial