ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಸಿಎಂ

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಸಂಶೋಧನಾ ಮತ್ತು ಅಭಿವೃದ್ಧಿ ಕಂಪನಿಗಳು ಬೆಂಗಳೂರಿನಲ್ಲಿರುವುದಾಗಿ ತಿಳಿಸಿದರು.

ಇಡೀ ದೇಶದಲ್ಲೇ ಅತಿ ಹೆಚ್ಚು ನವೋದ್ಯಮಗಳು ಕರ್ನಾಟಕದಲ್ಲಿದೆ. ದೇಶದಲ್ಲೇ ಮೊದಲ ಬಾರಿಗೆ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿಗಳನ್ನು ಕರ್ನಾಟಕ ಸರ್ಕಾರ ರೂಪಿಸುತ್ತಿದೆ. ಯುವ ಜನತೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರ್ನಾಟಕ ಅತ್ಯುತ್ತಮ ರಾಜ್ಯ ಎಂದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸ್ಟಾರ್ಟ್ ಅಪ್, ಮೇಕ್ ಇನ್ ಇಂಡಿಯಾ ಮತ್ತಿತರ ಯೋಜನೆಗಳ ಪ್ರಯೋಜನಗಳನ್ನು ಯುವಜನತೆಗೆ ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ನನಗೆ ಮಂಡ್ಯದಲ್ಲಿ ಸೋಲಿಸುವ ಶಕ್ತಿ ಇದೆಯಲ್ಲ ಬೆನ್ನು ತಟ್ರಯ್ಯ;HDK ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

Mon Oct 11 , 2021
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್​.ಡಿ.ಕುಮಾರಸ್ವಾಮಿ ಮಧ್ಯೆ ಆರೋಪ–ಪ್ರತ್ಯಾರೋಪಗಳ ಜಟಾಪಟಿ ಮುಂದುವರೆದಿದೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ತನ್ನ ಪುತ್ರ ನಿಖಿಲ್​ ಸೋಲಲು ಸಿದ್ದರಾಮಯ್ಯನೇ ಕಾರಣ ಎಂಬ ಹೆಚ್‌ ​ಡಿಕೆ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನನಗೆ ಮಂಡ್ಯದಲ್ಲಿ ಸೋಲಿಸುವ ಶಕ್ತಿ ಇದೆಯಲ್ಲ. ಮಂಡ್ಯದಲ್ಲಿ ಸೋಲಿಸುವ ಶಕ್ತಿಗೆ ಬೆನ್ನು ತಟ್ರಯ್ಯ ಎಂದು ವ್ಯಂಗ್ಯವಾಡಿದರು. ಹಾಗಾದ್ರೆ ಹಾಸನದಲ್ಲಿ ಗೆಲ್ಲಿಸಿದ್ದು ಯಾರು ಎಂದು ಪ್ರಶ್ನಿಸಿದರು. ಕಳೆದ ಲೋಕಸಭಾ ಚುನವಾಣೆಯಲ್ಲಿ ಜೆಡಿಎಸ್​ ಹಾಸನದಲ್ಲಿ […]

Advertisement

Wordpress Social Share Plugin powered by Ultimatelysocial