ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ:

ಲಬುರಗಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುವುದು ಎಂದು ಗುಲ್ಬರ್ಗ ವಿವಿಯಲ್ಲಿ ಭಾನುವಾರ ರಾತ್ರಿ ಮುಕ್ತಾಯಗೊಂಡ ಕಲ್ಯಾಣ ಕರ್ನಾಟಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ನಾನು ನೀಡಿದ ಮಾತಿನಂತೆ 7ನೇ ವೇತನ ಆಯೋಗ ರಚಿಸಿದ್ದು, ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ. ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧವಿದ್ದೇವೆ. ಮೊದಲು ವರದಿ ಬರಲಿ, ನೌಕರರ ಸಂಘದವರು ಸ್ವಲ್ಪ ತಾಳ್ಮೆಯಿಂದ ಇದ್ದರೆ ಎಲ್ಲವೂ ಸರಿಯಾಗುತ್ತದೆ ಎಂದು ತಿಳಿಸಿದ್ದಾರೆ.ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಅವಧಿಗೆ ಮೊದಲೇ ವೇತನ ಆಯೋಗ ರಚಿಸಿದ್ದು ಇತಿಹಾಸದಲ್ಲೇ ಇದೇ ಮೊದಲಾಗಿದ್ದು, ಇದು ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಸರ್ಕಾರಿ ನೌಕರರ ಬಗ್ಗೆ ಇರುವ ಕಾಳಜಿಯಾಗಿದೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಿಂಹ ರಾಶಿ ಭವಿಷ್ಯ.

Mon Feb 27 , 2023
  ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ಯಾರ ಹತ್ತಿರವಾದರು ಸಾಲವನ್ನು ತೆಗೆದುಕೊಂಡಿರುವ ಜನರು, ಇಂದು ಯಾವುದೇ ಪರಿಸ್ಥಿತಿಯಲ್ಲೂ ಸಾಲವನ್ನು ಮರುಪಾವತಿಸಬೇಕಾಗುತ್ತದೆ, ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ದುರ್ಬಲವಾಗುತ್ತದೆ. ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ನೀವು ಅವರ ಸಲುವಾಗಿ ಕಾಳಜಿ ತೆಗೆದುಕೊಳ್ಳುತ್ತೀರೆಂದು […]

Advertisement

Wordpress Social Share Plugin powered by Ultimatelysocial