ಸಾಮೂಹಿಕವಾಗಿ ಜಾದಳ ಪಕ್ಷ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಎಂ ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಬೋರೆದೊಡ್ಡಿ ಉದ್ದಟ್ಟಿ, ಮಾವತ್ತೂರು ಗ್ರಾಮಗಳಲ್ಲಿ ಜಾದಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಕೈಗೊಂಡಿದ್ದ ಜನಪರ ಕಾರ್ಯಕ್ರಮಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಿದೆ. ಕ್ಷೇತ್ರದಲ್ಲಿ ಜನತಾದಳ ಪರ್ವ ಮುಂದುವರೆದಿದ್ದು ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿ ಹಾಗೂ ನನ್ನ ಪಕ್ಷ ಸಂಘಟನೆ ಬಡವರಿಗೆ ಹಮ್ಮಿಕೊಂಡಿರುವ ಜನಪರ ಕಾರ್ಯಕ್ರಮಗಳು, ನಿರುದ್ಯೋಗಿ ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ಅವರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕ್ರಮವಹಿಸಿದ್ದೇನೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳ ಸಮಸ್ಯೆಯನ್ನು ಹತ್ತಿರದಿಂದ ಕಂಡಿದ್ದೇನೆ ನಿಮ್ಮಗಳ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತೇನೆ. ಕ್ಷೇತ್ರದ ಮತದಾರರು ಒಂದು ಬಾರಿ ನನಗೆ ಅವಕಾಶ ಮಾಡಿಕೊಡಿ ನಾನು ನಿಮಗೆ ಮೆಚ್ಚುವಂತಹ ಕೆಲಸ ಮಾಡಿದರೆ ನನ್ನನ್ನು ಒಪ್ಪಿಕೊಳ್ಳಿ ಇಲ್ಲದಿದ್ದರೆ ತಿರಸ್ಕರಿಸಿ ಎಂದು ಮನವಿ ಮಾಡಿದರು.ಶತಾಯಗತಾಯ ಮುಂದಿನ ಚುನಾವಣೆಯಲ್ಲಿ ಗೆಲ್ಲಲೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮಂಜುನಾಥ್ ರವರ ಪರ ಕ್ಷೇತ್ರದೆಲ್ಲೆಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರೆದೊಡ್ಡಿ, ಉದ್ದಟ್ಟಿ ಮಾವತ್ತೂರು ಗ್ರಾಮದ ನೂರಕ್ಕೂ ಹೆಚ್ಚು ಯುವಕರು ಹಾಗೂ ಮಹಿಳೆಯರು ಕಾಂಗ್ರೆಸ್ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮ ಗಾಂಜಾ ಮಾರಾಟ,ಪ್ರಕರಣ ದಾಖಲು ಬಂಧನ....

Sat Dec 17 , 2022
  ಯಳಂದೂರು ತಾಲ್ಲೂಕಿನ ಕೆ.ದೇವರಹಳ್ಳಿ ಗ್ರಾಮದಲ್ಲಿ ಗಾಂಜಾ ವಶ.ಖಚಿತ ಮಾಹಿತಿ ಆದಾರದ ಮೇಲೆ ಮಾನ್ಯ ಅಬಕಾರಿ ಜಂಟಿ ಆಯುಕ್ತರು ಮೈಸೂರು ವಿಭಾಗ ಮೈಸೂರು ರವರ ಆದೇಶದಂತೆ ಹಾಗೂ ಮಾನ್ಯ ಅಬಕಾರಿ ಉಪ, ಆಯುಕ್ತರು ಚಾಮರಾಜ ನಗರ ಜಿಲ್ಲೆ ರವರ ನಿರ್ದೇಶನದಂತೆ ಮತ್ತು ಅಬಕಾರಿ ಉಪ ಅಧೀಕ್ಷಕರು ಚಾಮರಾಜನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಚಾಮರಾಜನಗರ ತಾಲ್ಲೂಕಿನ ಕೆ. ದೇವರಹಳ್ಳಿ ಗ್ರಾಮದ ಮಾದೇಗೌಡ ಬಿನ್ ವೀರೇಗೌಡ ರವರ ಮನೆಯ ಮೇಲೆ ಚಾಮರಾಜನಗರ […]

Advertisement

Wordpress Social Share Plugin powered by Ultimatelysocial