ಮಾಜಿ ಕಮೀಷನರ್ ಎಎಪಿ ಮುಖಂಡ ಭಾಸ್ಕರ್ ರಾವ್ ನಾಳೆ ಬಿಜೆಪಿಗೆ.

 

ನಗರದ ಮಾಜಿ ಪೊಲೀಸ್ ಆಯುಕ್ತ ಹಾಗೂ ಆಮ್‌ ಆದ್ಮಿ ಪಕ್ಷ(ಎಎಪಿ)ದ ಮುಖಂಡ ಭಾಸ್ಕರ್ ರಾವ್ ಅವರು ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಕಂದಾಯ ಸಚಿವ ಆರ್‌.ಅಶೋಕ ಅವರನ್ನು ಇಂದು ಭೇಟಿ ಮಾಡಿದ್ದ ಸ್ವಯಂ ನಿವೃತ್ತಿ ಪಡೆದ ಹೆಚ್ಚುವರಿ ಪೊಲೀಸ್ ನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.
ತಾವು ಬಿಜೆಪಿ ಸೇರುತ್ತಿರುವುದು ನಿಜ. ನಾಳೆಯೇ ಸೇರ್ಪಡೆಗೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್‌ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಆರಂಭದಲ್ಲಿ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪಕ್ಷದಲ್ಲೂ ಸಕ್ರಿಯರಾಗಿದ್ದರು.ಆದರೆ ಕಳೆದ ಒಂದೆರಡು ತಿಂಗಳಿಂದ ಅವರು ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರದೇ ತೆರೆಮರೆಯಲ್ಲಿ ಬಿಜೆಪಿ ಸೇರುವ ಪ್ರಯತ್ನ ನಡೆಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈ ಅಧಿಕಾರಕ್ಕೆ ಬಂದರೆ 7ನೇ ವೇತನ ಆಯೋಗದ ವರದಿ ಜಾರಿ ಡಿಕೆಶಿ.

Wed Mar 1 , 2023
  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 7 ನೇ ವೇತನ ಆಯೋಗದ ವರದಿ ಜಾರಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಶ್ವಾಸನೆ ನೀಡಿದ್ದಾರೆ.7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಾಳೆಯಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಯಂತ್ರ ಸ್ಥಗಿತಗೊಳ್ಳಲಿದೆ ಎಂದು ಹಾಸನದ ಆಲೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡುತ್ತಾ ತಿಳಿಸಿದರು.ರಾಜ್ಯದ ಜನರ ಸಂಕಷ್ಟ, ನೋವು ಅರಿತು ಅವುಗಳಿಗೆ ಪರಿಹಾರ ಕಲ್ಪಿಸಲು ಮಾಡುತ್ತಿರುವ ಯಾತ್ರೆಯೇ ಪ್ರಜಾಧ್ವನಿ ಯಾತ್ರೆ. […]

Advertisement

Wordpress Social Share Plugin powered by Ultimatelysocial