ಮೇಕೆದಾಟು ಪಾದಯಾತ್ರೆ ಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಪಾಸಿಟಿವ್!

ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ   ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದಿದೆ.

ಮೂಲಗಳ ಪ್ರಕಾರ, ಕೋಲಾರದ 110 ಪೊಲೀಸರ ಪೈಕಿ ಈ ವರೆಗೂ 43 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 25 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.

ಕೆಜಿಎಫ್‌ನಿಂದ ಕರ್ತವ್ಯದಲ್ಲಿದ್ದ 110 ಸಿಬ್ಬಂದಿಯಲ್ಲಿ 60 ಸಿಬ್ಬಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 20 ಮಂದಿಗೆ ಪಾಸಿಟಿವ್ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಪರೀಕ್ಷೆಗೊಳಪಟ್ಟಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಪಾಸಿಟಿವ್ ಬಂದಿದೆ ಎಂದು ವರದಿಗಳು ತಿಳಿಸಿವೆ.

ಸೋಂಕಿತರ ಪ್ರತ್ಯೇಕತೆ ಮತ್ತು ಚಿಕಿತ್ಸೆಗಾಗಿ ಕೂಡಲೇ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲು ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಪಾದಯಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರವನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ವೈದ್ಯಕೀಯ ವರದಿ ನೆಗೆಟಿವ್ ಬರುವವರೆಗೂ ಎಲ್ಲರನ್ನೂ ಐಸೋಲೇಷನ್ ನಲ್ಲಿ ಇರಿಸಲಾಗುತ್ತಿದೆ ಎಂದು ಐಜಿಪಿ ಎಂ ಚಂದ್ರಶೇಖರ್ ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನ ಶಾಪಿಂಗ್ ಮಾಲ್‌ಒಂದರಲ್ಲಿ ಅಗ್ನಿ ಅವಘಡ ವೀಕೆಂಡ್ ಕರ್ಫ್ಯೂನಿಂದ ಜೀವ ರಕ್ಷಣೆ

Sat Jan 15 , 2022
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಾಳಿಕ ಬೆಂಕಿ ನಿಯಂತ್ರಿಸಲಾಯಿತು, ದೊಡ್ಡ ಅನಾಹುತ ತಪ್ಪಿತು. ಶಾಪಿಂಗ್‌ ಮಾಲ್‌ನ ಗ್ರೌಂಡ್ ಪ್ಲೋರ್‌ನಲ್ಲಿರುವ ಸೂಪರ್ ಮಾರ್ಕೆಟ್‌ನ ಸ್ಟೋರೇಜ್‌ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ […]

Advertisement

Wordpress Social Share Plugin powered by Ultimatelysocial