ದೇಶದಲ್ಲಿ ಕಾಂಗ್ರೆಸ್ ಅವನತಿಗೆ ಇಬ್ಬರು ಸಿದ್ದು ಕಾರಣ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವ್ಯಂಗ್ಯ…*

ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್‌ ಅವನತಿಗೆ ಇಬ್ಬರು ಸಿದ್ದುಗಳು ಕಾರಣ, ಒಬ್ಬರು ಪಂಜಾಬಿನ ಸಿದ್ದು ಮತ್ತೊಬ್ಬರು ರಾಜ್ಯದಲ್ಲಿನ ಸಿದ್ದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಹೆಸರಿನಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಲು ಹೊರಟಿದ್ದಾರೆ. ಇದುವೇ ಕಾಂಗ್ರೆಸ್ ನವರಿಗೆ ದೊಡ್ಡ ವಿಷಯವಾಗಿದೆ.‌ ಕಾಂಗ್ರೆಸ್ ನವರಿಗೆ ಜನರ ಸಮಸ್ಯೆಗಳು ಬೇಕಾಗಿಲ್ಲ. ಅವರಿಗೆ ಸಮಯವು ಇಲ್ಲ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಅವರ ಜನ್ಮದಿನವನ್ನು ಅದ್ದೂರಿಯಾಗಿ ಮಾಡುವುದು ಅವರಿಗೆ ಬಿಟ್ಟ ವಿಚಾರ, ಈ ಹಿಂದೆ ಸಿದ್ದರಾಮಯ್ಯ ಅವರು ಬಾದಾಮಿಯಿಂದ ಸಾವಿರ ಮತಗಳಿಂದ ಗೆದ್ದವರು. ಅಲ್ಲಿ ಏನಾದರೂ ಸೋತ್ತಿದ್ದರೇ ಅವರ ರಾಜಕೀಯ ಜೀವನವೇ ಇತಿಶ್ರೀ ಆಗತ್ತಾ ಇತ್ತು. ಅಲ್ಲಿ ಗೆದ್ದರು ಕೂಡಾ ಚಾಮುಂಡೇಶ್ವರಿಯಲ್ಲಿ 30 ಸಾವಿರ ಅಂತರದಿಂದ ಸೋಲು ಕಂಡಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ ತಮಗೆ ಒಕ್ಕಲಿಗರ ಮತಗಳು ಬೀಳುತ್ತವೆ ನಾನು ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದರೇ, ಇತ ಹಿಂದೂಳಿದ ವರ್ಗದವರ ಮತ ನನಗೆ ಬೀಳುತ್ತವೇ ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಇವರಿಬ್ಬರ ಒಳ ಹೋರಾಟದಿಂದಲೇ ಕಾಂಗ್ರೇಸ್ ನ ಅವನತಿ ಪ್ರಾರಂಭ ಆಗಲಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಮೇಲೆ ಭರವಸೆ ಇದ್ದರೆ ಬಾದಾಮಿಯಲ್ಲಿಯೇ ನಿಂತು ಗೆದ್ದು ತೋರಿಸಲಿ ಅದು ಬಿಟ್ಟು ಬೇರೆ ಕಡೆಗೆ ಕ್ಷೇತ್ರ ಹುಡುಕುವುದು ಯಾಕೆ? ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಜಿ.ಎಸ್.ಟಿ ವಿಚಾರವಾಗಿ ಮಾತನಾಡಿದ ಅವರು, ಜಿ.ಎಸ್.ಟಿ ಅವಧಿ ವಿಸ್ತರಣೆ ಮತ್ತೊಂದಕ್ಕೆ ಕೌನ್ಸಿಲ್ ಎಂಬುದಿದೆ. ಅಲ್ಲಿ ಎಲ್ಲವೂ ನಿರ್ಧಾರ ಆಗಲಿದೆ. ಎಲ್ಲ ರಾಜ್ಯಗಳ ಸದಸ್ಯರು ಅಲ್ಲಿ ಬಂದಿರುತ್ತಾರೆ. ವಿಸ್ತ್ರತ ಚರ್ಚೆ ಆಗುತ್ತದೆ. ಅಲ್ಲಿ ಯಾಕ ಇವರು ಚರ್ಚೆ ಮಾಡಲಿಲ್ಲ. ಅದು ಬಿಟ್ಟು ಇದೀಗ ಮೊಸರು, ಮಜ್ಜಿಗೆ ಮತ್ತೊಂದಕ್ಕೆ ಬೆಲೆ ಏರಿಕೆ ಮಾಡಲಾಗಿದೆ ಎಂದು ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಶೆಟ್ಟರ್ ಹರಿಹಾಯ್ದರು.

ಮಳೆಯಿಂದ ನಗರದ ರಸ್ತೆಗಳು ಹಾಳಾಗಿವೆ. ಜನರಿಗೆ ಸಮಸ್ಯೆ ಆಗುವ ಕಾರಣಕ್ಕೆ ಅವಸರ ಮಾಡಿ ತಗ್ಗು-ಗುಂಡಿ ಮುಚ್ಚುವ ಕೆಲಸ ಮಾಡಲಾಗಿದೆ. ಇದರಿಂದ ಮತ್ತೆ ಮಳೆಗೆ ರಸ್ತೆ ಹದಗೆಡುವ ಪರಿಸ್ಥಿತಿ ಇರಲಿದೆ. ಹೀಗಾಗಿ ಬಿಸಿಲು ಬೀಳುವವರೆಗೆ ಕಾದು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಬೇಕೆಂದು ಪಾಲಿಕೆ ಆಯುಕ್ತರಿಗೆ ಈಗಾಗಲೇ ತಿಳಿಸಿದ್ದೇನೆ ಎಂದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಾಗಿವೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾಮಗಾರಿ ಕಳಪೆಯಾಗಿದೆ ಎಂಬುದನ್ನು ಜನಪ್ರತಿನಿಧಿಗಳಿಗೆ ತಿಳಿಸುವ ಕೆಲಸ ಆಗಲಿ. ನಾವು ಕೂಡಾ ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡುವೆ. ಅಲ್ಲದೇ ತನಿಖೆಗೆ ಒತ್ತಾಯಿಸುವೆ. ಕಳಪೆಯಾಗಿದ್ದರೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪುಣೆ ಮೆಟ್ರೋ 2 ನೇ ರೀಚ್‌ನಲ್ಲಿ ವೈಡಕ್ಟ್ ಕೆಲಸವನ್ನು ಪೂರ್ಣಗೊಳಿಸುತ್ತದೆ

Wed Jul 20 , 2022
ಪುಣೆ ಮೆಟ್ರೋ ಮಂಗಳವಾರ 2ನೇ ರೀಚ್‌ನಲ್ಲಿ (ವನಜ್ ಮೆಟ್ರೋ ನಿಲ್ದಾಣದಿಂದ ಸಿವಿಲ್ ಕೋರ್ಟ್ ಮೆಟ್ರೋ ನಿಲ್ದಾಣ) ವಯಡಕ್ಟ್‌ಗಳ ಕೆಲಸವನ್ನು ಪೂರ್ಣಗೊಳಿಸಿದೆ. ಮಹಾ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಡಾ.ಬ್ರಿಜೇಶ್ ದೀಕ್ಷಿತ್ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಮತ್ತು ಇತರ ಎಲ್ಲಾ ಸರ್ಕಾರಿ ಸಂಸ್ಥೆಗಳ ಸಕ್ರಿಯ ಬೆಂಬಲ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಮೆಟ್ರೋ ಸಿವಿಲ್ ಕೋರ್ಟ್ ಸ್ಟೇಷನ್ ವರೆಗೆ […]

Advertisement

Wordpress Social Share Plugin powered by Ultimatelysocial