ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತವಾಗಿ ದಲಿತ ನಾಯಕತ್ವ ದಮನ : ಚಲವಾದಿ ನಾರಾಯಣಸ್ವಾಮಿ

 

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಸ್ಥಾನ ಸಿಗುವ ಹಂತದಲ್ಲಿ ದಲಿತ ನಾಯಕತ್ವವನ್ನು ವ್ಯವಸ್ಥಿತ ದಮನ ಮಾಡುತ್ತಲೇ ಬರಲಾಗುತ್ತಿದೆ. ಆದರೆ ಬಿಜೆಪಿ ಪಕ್ಷ ಹೋರಾಟಕ್ಕೆ ಅವಕಾಶ ಇಲ್ಲದಂತೆ, ಯಾರನ್ನೂ ಕೇಳದೇ, ಹೇಳದೇ ದಲಿತರಿಗೆ ರಾಷ್ಟ್ರಪತಿ ಹುದ್ದೆಯಂತಹ ಅವಕಾಶ ನೀಡುತ್ತಿದೆ ಎಂದು ಬಿಜೆಪಿ ಎಸ್ಪಿ ಮೋರ್ಚಾ ರಾಜ್ಯಾಧ್ಯಕ್ಷ, ಮೇಲ್ಮನೆ ಶಾಸಕ ಚಲವಾದಿ ನಾರಾಯಣಸ್ವಾಮಿ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಬಸವಲಿಂಗಪ್ಪ ಅವರಿಗೆ ಮುಖ್ಯಮಂತ್ರಿ ಅವಕಾಶ ತಪ್ಪಿಸಿದ್ದು ವೀರಪ್ಪ ಮೊಯ್ಲಿ ಮಾಡಿದ ಕುತಂತ್ರ. ಜಿ.ಪರಮೇಶ್ವರ ಅವರಿಗೆ ಎರಡು ಬಾರಿ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿ ನೀಡಿದರೂ ವ್ಯವಸ್ಥಿತ ಕುತಂತ್ರದಿಂದ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ. ಜೊತೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲಾಯಿತು. ಈಗ ಸಂಸತ್ ವಿಪಕ್ಷ ನಾಯಕ ಸ್ಥಾನ ನೀಡಿದ್ದರೆ ಅದಕ್ಕೆ ಕಾರಣ ದಲಿತರಿಗೆ ನೀಡಿದ ಅವಕಾಶವಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಈಗ ದಲಿತ ನಾಯಕರೇ ಇಲ್ಲದ ಅನಿವಾರ್ಯ ಕಾರಣದಿಂದ ಎಂದು ದೂರಿದರು.

ಹೀಗೆ ಕಾಂಗ್ರೆಸ್ ದಲಿತ ನಾಯಕತ್ವವನ್ನು ತುಳಿಯುವ ವ್ಯವಸ್ಥಿತ ಹುನ್ನಾರ ನಡೆಯುತ್ತಲೇ ಇದೆ. ಕೇವಲ ಆರು ವರ್ಷದ ಹಿಂದೆ ಪಕ್ಷಕ್ಕೆ ಬಂದ ಸಿದ್ದರಾಮಯ್ಯ ಇಡೀ ದಲಿತ ನಾಯಕತ್ವವನ್ನೇ ದಮನ ಮಾಡಿ ಮುಖ್ಯಮಂತ್ರಿಯಾದರು ಎಂದು ಹರಿಹಾಯ್ದರು.

ಬಿಜೆಪಿ ಪಕ್ಷದಲ್ಲಿ ಹೋರಾಟ ಮಾಡದೇ, ಆಗ್ರಹ ಮಾಡದೇ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಿದೆ. ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯಿಂದ ವಿವಿಧ ರಾಜ್ಯಗಳಲ್ಲಿ ದಲಿತರಿಗೆ ಹತ್ತು ಹಲವು ರಾಜಕೀಯ ಅಧಿಕಾರ ನೀಡಿದೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ 60 ಸ್ಥಾನ ಗೆಲ್ಲುವುದೂ ಕಷ್ಟವಾಗಿರುವ ದುಸ್ಥಿತಿ ಇದ್ದರೂ ಇಲ್ಲದ ಮುಖ್ಯಮಂತ್ರಿ ಸ್ಥಾನಕ್ಕೆ ಡಜನ್ ನಾಯಕರು ಈಗಲೇ ಕಿತ್ತಾಟ ಆರಂಭಿಸಿದ್ದಾರೆ. ಆದರೆ ಬಿಜೆಪಿ 150 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನ ಪಡೆಯುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೇಶವನ್ನುದ್ದೇಶಿಸಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಭಾಷಣ

Sun Jul 24 , 2022
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಂಜೆ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸಲಿರುವ ಹಿನ್ನೆಲೆಯಲ್ಲಿ ಇದು ಅವರ ವಿದಾಯದ ಭಾಷಣ ಎಂದು ಹೇಳಲಾಗಿದೆ. ಅವರ ಭಾಷಣ ಆಲ್ ಇಂಡಿಯಾ ರೇಡಿಯೋ, ದೂರದರ್ಶನದ ಹಿಂದಿ ಹಾಗೂ ಇಂಗ್ಲಿಷ್ ಚಾನೆಲ್ ಗಳಲ್ಲಿ ಪ್ರಸಾರವಾಗಲಿದ್ದು, ದೂರದರ್ಶನದ ಪ್ರಾದೇಶಿಕ ಚಾನಲ್ ಗಳು ಸಹ ಸ್ಥಳೀಯ ಭಾಷೆಯಲ್ಲಿ ಭಾಷಣವನ್ನು ಪ್ರಸಾರ ಮಾಡಲಿವೆ. ರಾಮನಾಥ್ ಕೋವಿಂದ್ ಇಂದು ನಿವೃತ್ತರಾಗಲಿದ್ದು, ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು […]

Advertisement

Wordpress Social Share Plugin powered by Ultimatelysocial