ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ

ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಮಂಡ್ಯದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಯನ್ನೇ 2, 000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ತಮಾಷೆಯಾಗಿದೆ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ರಾಜ್ಯದಲ್ಲಿ ಆಪರೇಷನ್ ಕಮಲದ ಅನೈತಿಕ ಕೂಸು ಬಿಜೆಪಿ ಸರ್ಕಾರ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಬಂದು, ವಿಧಾನಸೌಧವೇ ಕಮಿಷನ್ ಅಡ್ಡೆಯಾಗಿ ಬದಲಾಗಿದೆ. ಶೇ 40 ರಷ್ಟು ಕಮೀಷನ್ ನಲ್ಲಿ ನಿಮ್ಮ ಪಾಲೆಷ್ಟು? ಎಂದು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಲ್ ನಾಸರ್ ಪಾಲಾದ ರೊನಾಲ್ಡೊ: ವರ್ಷಕ್ಕೆ ಬರೋಬ್ಬರಿ 1770 ಕೋಟಿ ರೂ ನೀಡುತ್ತೆ ಸೌದಿ ಕ್ಲಬ್

Sat Dec 31 , 2022
ಮ್ಯಾಂಚೆಸ್ಟರ್ ಯುನೈಟೆಡ್ ತಂಡದಿಂದ ಹೊರಬಂದ ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಮುಂದೆ ಸೌದಿ ಅರೇಬಿಯಾದ ಕ್ಲಬ್ ಅಲ್ ನಾಸರ್ ಗೆ ಆಡಲಿದ್ದಾರೆ. ಇದರ ಬಗ್ಗೆ ಕ್ಲಬ್ ಅಧಿಕೃತವಾಗಿ ಘೋಷಣೆ ಮಾಡಿದೆ.ಸಂದರ್ಶನವೊಂದರಲ್ಲಿ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು ಮತ್ತು ಕೋಚ್ ಬಗ್ಗೆ ಹೇಳಿಕೆ ನೀಡಿದ್ದರು.ಈ ವಿವಾದದ ಬಳಿಕ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತೊರೆಯುವುದು ಖಚಿತವಾಗಿತ್ತು. ಆದರೆ ಯಾವ ತಂಡ ಈ ದಿಗ್ಗಜ ಆಟಗಾರನನ್ನು ಖರೀದಿ ಮಾಡುತ್ತದೆ […]

Advertisement

Wordpress Social Share Plugin powered by Ultimatelysocial