ಮನೆಯ ಎಲ್ಲಾ ಸದಸ್ಯರಿಗೂ ಪ್ರತಿ ತಿಂಗಳು ಹತ್ತು ಕೆ.ಜಿ ಉಚಿತ ಅಕ್ಕಿ ಕಾಂಗ್ರೆಸ್‌ 3ನೇ ಗ್ಯಾರಂಟಿ.

ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ ತನ್ನ ಮೂರನೇ ಭರವಸೆಯನ್ನು ರಾಜ್ಯದ ಜನರಿಗೆ ನೀಡಿದೆ. ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು ಹತ್ತು ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿಕೆ ಶಿವಕುಮಾರ್ ಮಾತನಾಡಿ, “ಬೆಲೆ ಏರಿಕೆಗೆ ತತ್ತರಿಸಿರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್‌ ಎರಡು ಗ್ಯಾರಂಟಿ (ಭರವಸೆ) ಘೋಷಣೆ ಮಾಡಿದೆ. ಮೊದಲು ಉಚಿತ ವಿದ್ಯುತ್ ಘೋಷಣೆ ಮಾಡಿದ್ದೆವು. ಆ ನಂತರ ಪ್ರಿಯಾಂಕಾ ಗಾಂಧಿ ಅವರು ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಘೋಷಣೆ ಮಾಡಿದ್ದರು. ಮುಂದುವರೆದು ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು ಹತ್ತು ಕೆ.ಜಿ ಅಕ್ಕಿ ನೀಡಲಾಗುವುದು ಎಂದು ತಿಳಿಸಿದರು.ರಾಜ್ಯ ಸರ್ಕಾರವು 7 ಕೆ ಜಿ ಅಕ್ಕಿಯನ್ನ 5 ಕೆ ಜಿ ಇಳಿಸಿದ್ದಾರೆ. ಇದರಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ.ಹೀಗಾಗಿ, ಕಾಂಗ್ರೆಸ್‌ ತನ್ನ ಮೂರನೇ ಗ್ಯಾರಂಟಿ ಅನ್ನಭಾಗ್ಯ ಘೋಷಣೆ ಮಾಡಿದ್ದೇವೆ. ಜನರ ಹಸಿವು ನೀಗಿಸಲು ಪ್ರತಿ ತಿಂಗಳು ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, “ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡಕುಟುಂಬದ ಪ್ರತೀ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ” ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಸೀಸ್‌ ಎದುರು ಭಾರತದ ಸೋಲಿಗೆ 5 ಪ್ರಮುಖ ಕಾರಣಗಳು!.

Fri Feb 24 , 2023
  ದಕ್ಷಿಣ ಆಫ್ರಿಖಾದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ಅಭಿಯಾನ ಸೆಮಿಫೈನಲ್‌ಗೆ ಅಂತ್ಯಗೊಂಡಿದೆ. ಗುರುವಾರ ನಡೆದ ರೋಚಕ ಸೆಮಿಫೈನಲ್‌ ಪಂದ್ಯದಲ್ಲಿ ಬಲಿಷ್ಠ ಹಾಗೂ ಡಿಫೆಂಡಿಂಗ್‌ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಜಿದ್ದಾಜಿದ್ದಿನ ಹೋರಾಟ ನಡೆಸಿದ ಟೀಮ್ ಇಂಡಿಯಾ, ಕೊನೇ ಓವರ್‌ನಲ್ಲಿ 5 ರನ್‌ ಅಂತರದ ವೀರೋಚಿತ ಸೋಲುಂಡಿತು. ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡ ದಿಟ್ಟ ಬ್ಯಾಟಿಂಗ್‌ […]

Advertisement

Wordpress Social Share Plugin powered by Ultimatelysocial