‘ಮುಂಬರುವ ವಿಧಾನಪರಿಷತ್‌ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕು!

ಬೆಳಗಾವಿ: ‘ಮುಂಬರುವ ವಿಧಾನಪರಿಷತ್‌ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪಕ್ಷದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.’ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಭ್ಯರ್ಥಿಯನ್ನು ಶಿಫಾರಸು ಮಾಡಲಾಗುವುದು’ ಎಂದರು.’ಬೆಳಗಾವಿ ಮತ್ತು ಘಟಪ್ರಭಾದಲ್ಲಿ ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಎಲ್ಲ ಪದಾಧಿಕಾರಿಗಳೂ ತಪ್ಪದೆ ತರಬೇತಿ ಪಡದುಕೊಳ್ಳಬೇಕು’ ಎಂದು ಸಲಹೆ ನೀಡಿದರು.’ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಕೆಲಸ ಮಾಡಬೇಕು. ಮುಂಚೂಣಿ ಘಟಕದ ಪದಾಧಿಕಾರಿಗಳ ಮೇಲೆ ಜಾಸ್ತಿ ಜವಾಬ್ದಾರಿ ಇದ್ದು, ಅದನ್ನು ಸರಿಯಾಗಿ ನಿಭಾಯಿಸಬೇಕು’ ಎಂದು ಸೂಚಿಸದರು.’ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಪದಾಧಿಕಾರಿಗಳನ್ನು ಗುರುತಿಸಿ, ಉನ್ನತ ಸ್ಥಾನಮಾನ ನೀಡಲಾಗುವುದು. ಜತೆಗೆ ಸಹಾಯ, ಸಹಕಾರ ನೀಡುತ್ತೇವೆ’ ಎಂದು ತಿಳಿಸಿದರು.ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮುಖಂಡರಾದ ಪ್ರಕಾಶ ಹುಕ್ಕೇರಿ, ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಹಾವೀರ ಮೋಹಿತೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ಯಾರಸಿಟಮಾಲ್ನ ದೈನಂದಿನ ಬಳಕೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ, ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವು ಎಚ್ಚರಿಸಿದೆ

Tue Feb 8 , 2022
  ಸಂಶೋಧಕರು ನಡೆಸಿದ ಅಧ್ಯಯನವು ಪ್ಯಾರಸಿಟಮಾಲ್ನ ದೈನಂದಿನ ಬಳಕೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂದು ಕಂಡುಹಿಡಿದಿದೆ. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯದಲ್ಲಿರುವ ಜನರಿಗೆ ಪ್ಯಾರಸಿಟಮಾಲ್ ಅನ್ನು ಶಿಫಾರಸು ಮಾಡುವ ಮೊದಲು ಜಾಗರೂಕರಾಗಿರಿ ಎಂದು ಸಂಶೋಧಕರು ವೈದ್ಯರಿಗೆ ಕೇಳಿಕೊಂಡರು. ಎಡಿನ್‌ಬರ್ಗ್ ವಿಶ್ವವಿದ್ಯಾನಿಲಯದ ತಜ್ಞರು ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿರುವ 110 ರೋಗಿಗಳ ಮೇಲೆ ಅಧ್ಯಯನವನ್ನು ನಡೆಸಿದರು ಮತ್ತು “ಒಂದು ಗ್ರಾಂ ಪ್ಯಾರೆಸಿಟಮಾಲ್ ಅನ್ನು ದಿನಕ್ಕೆ […]

Advertisement

Wordpress Social Share Plugin powered by Ultimatelysocial