ಜಯದಶಮಿ ವೇಳೆಗೆ ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯವಾಗಿ ‘ತೃತೀಯ ರಾಜಕೀಯ ಶಕ್ತಿ’

 

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸುವುದು ಮತ್ತು ತೃತೀಯ ರಂಗದ ಕನಸು ಹೊತ್ತು ದೇಶ ಸುತ್ತುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಸುಧೀರ್ಘವಾಗಿ ಚರ್ಚಿಸಿದರು.

ವಿಜಯದಶಮಿ ವೇಳೆಗೆ (ಅಕ್ಟೋಬರ್ 5) ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾದ ತೃತೀಯ ರಾಜಕೀಯ ಶಕ್ತಿ ರೂಪಿಸುವುದಾಗಿ ಘೋಷಿಸಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ದೇಶದಲ್ಲಿ ಅತೀ ಶೀಘ್ರದಲ್ಲೇ ಬದಲಾವಣೆಯಾಗಲಿದೆ ಹಾಗೂ ದೇಶವೂ ಬದಲಾಗಲಿದೆ. ಎರಡು-ಮೂರು ತಿಂಗಳು ಕಾಯಿರಿ ಎಂದು ಕೆಸಿಆರ್‌ ಅವರು ಸೂಚ್ಯವಾಗಿ. ದೇಶದ ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಬದಲಾವಣೆ ತರಬೇಕಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿದರು.

ಹೈದರಾಬಾದ್‌ನಿಂದ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಳಿದ ಕೆಸಿಆರ್‌ ಅವರು ನೇರವಾಗಿ ದೇವೇಗೌಡರ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು. ಬಳಿಕ ತಮ್ಮ ನಿವಾಸಕ್ಕೆ ಆಗಮಿಸಿದ ಕೆಸಿಆರ್‌ ಅವರನ್ನು ದೇವೇಗೌಡರು ಆತ್ಮೀಯವಾಗಿ ಬರಮಾಡಿಕೊಂಡರು.

ಮೂರನೇ ಶಕ್ತಿ ಇಂದು ಅನಿವಾರ್ಯವಾಗಿದೆ. ಆಗ ತೆಗೆದುಕೊಂಡ ನಿರ್ಣಯ ಬೇರೆ, ಈಗ ತೆಗೆದುಕೊಳ್ಳುವ ನಿರ್ಣಯ ಬೇರೆ. ದೇಶದ ಇತಿಹಾಸಕ್ಕೆ ಇದು ಫೌಂಡೇಷನ್ ಹಾಕಲಿದೆ. ದೇಶ ಹಲವು ಸಮಸ್ಯೆ ಎದುರಿಸುತ್ತಿದೆ. ಜನರ ಸಮಸ್ಯೆ ಮುಂದಿಟ್ಟುಕೊಂಡೇ ಹೋಗುತ್ತೇವೆ.

ದೇಶದಲ್ಲಿ ಹಲವು‌ ಸಂಪನ್ಮೂಲಗಳಿದ್ದರೂ ಇವತ್ತಿಗೂ ಹಲವು‌ ಸಮಸ್ಯೆಗಳ ಬಗ್ಗೆ ಚರ್ಚೆ, ಪರಿಹಾರ ಇಲ್ಲ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನು ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ” ಎಂದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೆ.ಚಂದ್ರಶೇಖರರಾವ್ ಹರಿಹಾಯ್ದರು.

ಮುಂಬರುವ ರಾಷ್ಟ್ರಪತಿ ಚುನಾವಣೆ ವೇಳೆಗೆ ಪರ್ಯಾಯ ಶಕ್ತಿ ರಚಿಸುವಂತೆ ಚಂದ್ರಶೇಖರ್ ರಾವ್ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜುಲೈ ಅಂತ್ಯದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಅವಧಿ ಅಂತ್ಯವಾಗಲಿದೆ, ಹೀಗಾಗಿ ರಾಷ್ಟ್ರಪತಿ ಚುನಾವಣೆ ಮುಂದಾಳತ್ವವನ್ನು ದೇವೇಗೌಡರು ವಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ್ಮಿಗೆ ಸಹಕಾರ ಬ್ಯಾಂಕ್‍ಗಳಿಂದ ನೂರಾರು ಕೋಟಿ ಸಾಲ ಕೊಡಿಸಿದ್ದು ಯಾರು ಡಿಕೆಶಿಯವರೇ..?

Fri May 27 , 2022
ಬೆಂಗಳೂರು,ಮೇ27- ಕೆಪಿಸಿಸಿಯ ಬೇನಾಮಿ ಅಧ್ಯಕ್ಷೆಯ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದ ಅವಧಿಯಲ್ಲಿ ನಡೆಸಿದ ಅವ್ಯವಹಾರಗಳ ಬಗ್ಗೆ ಬೆಳಕು ಚೆಲ್ಲಬೇಕೇ? ಎಂದು ಬಿಜೆಪಿ ಪ್ರಶ್ನಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಳಗಾವಿಯ ಲಕ್ಷ್ಮಿಗೆ ಮಂಗಳೂರು, ಉತ್ತರ ಕನ್ನಡ ಹಾಗೂ ಇನ್ನಿತರ ಜಿಲ್ಲಾ ಸಹಕಾರ ಬ್ಯಾಂಕ್‍ಗಳಿಂದ ನೂರಾರು ಕೋಟಿ ಸಾಲ ಕೊಡಿಸಿದ್ದು ಯಾರು? ಐಟಿ, ಇಡಿ, ಸಿಬಿಐ ದಾಳಿ ಮಾಡಿದಾಗಲೆಲ್ಲ ಬಿಜೆಪಿ ಮೇಲೆ ಬೊಟ್ಟುಮಾಡುವ ಡಿಕೆಶಿ ಅವರೇ, […]

Advertisement

Wordpress Social Share Plugin powered by Ultimatelysocial