ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು.?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ, ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಮುಂಚೂಣಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಫೆಬ್ರವರಿ 25ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.ಈ ಕುರಿತು ಮಾತನಾಡಿರುವ ಡಿ,ಕೆ. ಶಿವಕುಮಾರ್, ನಾನು ಕೆ.ಪಿ.ಸಿ.ಸಿ. ಅಧ್ಯಕ್ಷನಾದ ಬಳಿಕ ಎಲ್ಲರನ್ನು ಕರೆದುಕೊಂಡು ಹೋಗಬೇಕಿತ್ತು. ಆ ವೇಳೆ ಆಗಲಿಲ್ಲ. ಈಗ ಕರೆದುಕೊಂಡು ಹೋಗುತ್ತಿದ್ದೇನೆ. ಹೈಕಮಾಂಡ್ ಬಳಿ ನಮ್ಮ ಅಭಿಪ್ರಾಯಗಳನ್ನು ನೀಡಲಿದ್ದೇವೆ. ಯಾರು ಯಾವ ಕೆಲಸ ಮಾಡಬೇಕು ಎಂಬ ಬಗ್ಗೆ ವರಿಷ್ಠರು ಸೂಚಿಸುತ್ತಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಪಂಜಾಬ್ ಚುನಾವಣೆ: ಖರಾರ್‌ನ ಶಿವ ದೇವಾಲಯದಲ್ಲಿ ಸಿಎಂ ಚನ್ನಿ ಪೂಜೆ ಸಲ್ಲಿಸಿದರು

Sun Feb 20 , 2022
  ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಭಾನುವಾರ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಆರಂಭಕ್ಕೂ ಮುನ್ನ ಖರಾರ್‌ನಲ್ಲಿರುವ ಶಿವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಚರಂಜಿತ್ ಸಿಂಗ್ ಚನ್ನಿ ಪಂಜಾಬ್ ಚುನಾವಣೆಯಲ್ಲಿ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾಗುತ್ತಿದ್ದಂತೆ, ಚರಂಜಿತ್ ಸಿಂಗ್ ಚನ್ನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡುಬಂದಿದೆ. ಇದಕ್ಕೂ ಮುನ್ನ ಚರಂಜಿತ್ ಸಿಂಗ್ ಚನ್ನಿ ಗುರುದ್ವಾರ ಶ್ರೀ ಕತಲಗಢ ಸಾಹಿಬ್‌ಗೆ ಭೇಟಿ […]

Advertisement

Wordpress Social Share Plugin powered by Ultimatelysocial