ಕಾಂಗ್ರೆಸ್ ಸುಳ್ಳು ಹೇಳುತ್ತದೆ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.

ಚಿಕ್ಕಮಗಳೂರು, ಜನವರಿ 27: 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದು, ನಿಶ್ಚಳ ಬಹು ಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಹತಾಶರಾಗಿರುವ ಕಾಂಗ್ರೆಸ್‌ನವರು ಉಚಿತಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ವ್ಯಂಗ್ಯವಾಡಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಹೇಳುತ್ತದೆ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿಯಾಗಿದ್ದು ರಾಜಸ್ಥಾನ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಭರವಸೆ ಈಡೇರಿಸಲಿಲ್ಲ. ರಾಜ್ಯದ ಜನರಿಗೆ ಕಾಂಗ್ರೆಸ್ ಸುಳ್ಳು ಭವರಸೆಗಳನ್ನು ನೀಡುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪ್ರಜಾಧ್ವನಿಯಾತ್ರೆ ನಡೆಸುತ್ತಿದೆ. ಆದರೆ ಮಾಡುವುದು ಮಾತ್ರ ಪ್ರಜಾದ್ರೋಹದ ಕೆಲಸ. ಕಾಂಗ್ರೆಸ್‌ನವರು ಭ್ರಷ್ಟಚಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವವರು ಆಧಾರಗಳನ್ನು ನೀಡಬೇಕು. ಸಂವಿಧಾನಿಕ ಸಂಸ್ಥೆಗಳ ಮೇಲೆ ಭರವಸೆ ಇಟ್ಟುಕೊಳ್ಳಬೇಕು. ಆಧಾರ ಕೊಟ್ಟು ಆರೋಪ ಮಾಡಿದರೆ ನಂಬಬಹುದು. ಸರ್ವಸಾಮಾನ್ಯವಾಗಿ ಆರೋಪ ಮಾಡಿದರೆ ಅದು ಆರೋಪ ಅನಿಸಿಕೊಳ್ಳುವುದಿಲ್ಲ ಎಂದರು.

ರಾಜಕಾರಣ ಕಲುಷಿತಗೊಂಡಿದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯವಸ್ಥೆಯಲ್ಲಿ ಎಲ್ಲರೂ ಕಳ್ಳರಲ್ಲ. ಹಾಗಂತ ಎಲ್ಲರೂ ಒಳ್ಳೆಯವರಲ್ಲ. ಅವರ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡರೇ ಅವರಿಗೆ ಅರಿವಾಗುತ್ತದೆ ಎಂದ ಸಿ.ಟಿ ರವಿ, ಹಾಸನ ಜೆಡಿಎಸ್ ಅಭ್ಯರ್ಥಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಎಚ್.ಡಿ.ದೇವೇಗೌಡರ ಕುಟುಂಬದೊಳಗಿನ ಜಗಳಕ್ಕೆ ಕೈಹಾಕುವುದಿಲ್ಲ. ಆ ಕುಟುಂಬದ ಜಗಳ ಅವರಿಗೆ ಬಿಡುತ್ತೇವೆ ಎಂದರು.

ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿಯ ಹಿರಿಮೆ-ಗರಿಮೆ ಹೆಚ್ಚಾಗಿದೆ

ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ಬಳಿಕ ಪದ್ಮಶ್ರೀ ಪ್ರಶಸ್ತಿ ಹಿರಿಮೆ ಗರಿಮೆ ಹೆಚ್ಚಾಗಿದೆ. ಈ ಹಿಂದೆ ಪ್ರಶಸ್ತಿಗಾಗಿ ದೊಡ್ಡ ಲಾಭಿ ನಡೆಯುತ್ತಿತ್ತು. ಈಗ ಪದ್ಮಶ್ರೀ ಪ್ರಶಸ್ತಿ ಜನರ ಪ್ರಶಸ್ತಿಯಾಗಿದೆ. ಎಲೆಮರೆ ಕಾಯಿಯಂತೆ ಕೆಲಸ ಮಾಡುವವರನ್ನು ಪ್ರಶಸ್ತಿ ಹುಡುಕಿಕೊಂಡು ಬರುತ್ತಿದೆ ಎಂದರು.

ರಾಜ್ಯದ 8 ಮಂದಿಗೆ ಪ್ರಶಸ್ತಿ ಬಂದಿದ್ದು, ಅವರನ್ನು ಅಭಿನಂದಿಸುವುದಾಗಿ ತಿಳಿಸಿದ ಸಿ.ಟಿ ರವಿ, ಮುತ್ಸದ್ದಿ ರಾಜ ಕಾರಣಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿದೆ. ಶ್ರೀಮಂತಿಕೆಯ ಅಹಂಕಾರದ ಲವಲೇಶವು ಇಲ್ಲದ ಸೇವೆಯನ್ನೇ ಧ್ಯೇಯವಾಗಿಸಿಕೊಂಡಿರುವ ಸುಧಾಮೂರ್ತಿ, ಸಾಹಿತ್ಯ ಕ್ಷೇತ್ರದಿಂದ ಎಸ್.ಎಲ್. ಭೈರಪ್ಪ ಅವರಿಗೆ ಪ್ರಶಸ್ತಿ ಲಭಿಸಿರುವುದು ಸಂತೋಷ ತಂದಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧಾರವಾಡ ಅವಳಿನಗರಕ್ಕೆ ಬರುತ್ತಿದೆ ವಂದೇ ಭಾರತ ರೈಲು: ಕಾರ್ಯಾಚರಣೆ ಚುರುಕು..!

Fri Jan 27 , 2023
  ಭಾರತೀಯ ರೈಲ್ವೆ ವಲಯದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವುದರ ಜೊತೆಗೆ ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಹಲವಾರು ಯೋಜನೆ ಜಾರಿಗೆ ತರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಜನರು ಕಾತರದಿಂದ ಕಾಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎಂಟು ಕೋಚ್ ಗಳನ್ನು ಜೋಡಿಸುವ ಬಗ್ಗೆ ಚಿಂತನೆ ನಡೆದಿದೆ.ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ […]

Advertisement

Wordpress Social Share Plugin powered by Ultimatelysocial