ಬಿಜೆಪಿಯವರು ಜಾತಿ ಧರ್ಮವನ್ನು ತಮ್ಮ ಅಭಿವೃದ್ಧಿ ಕಾರ್ಯಗಳ ಹಬ್ ಆಗಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ!

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬ್ರಿಟಿಷ್‌ ರು ದೇಶದಲ್ಲಿ ಒಡೆದು ಆಳುವ ನೀತಿ ಅನುಸರಿಸಿ ದೇಶವನ್ನು ಕೊಳ್ಳೆಹೊಡೆದರು. ಅದೇ ಮಾದರಿಯಲ್ಲಿ ಬಿಜೆಪಿ ನಡೆಯುತ್ತಿದೆ. ಬಿಜೆಪಿ ಎಂದರೆ ಬ್ರಿಟಿಷ್ ಜನತಾ ಪಕ್ಷ ಒಡೆದು ಹಾಳುವ ನೀತಿಯಲ್ಲಿಯೇ ಅವರು ಕೆಲಸ ಮಾಡುತ್ತಿದ್ದಾರೆ.ಬಿಜೆಪಿಗೆ ಅಧಿಕಾರದಲ್ಲಿ ಇರಬೇಕು ಕಮಿಷನ್ ಬರಬೇಕು ಎಂಬುದು ಅಷ್ಟೇ ಎಂದು ಹರಿಹಾಯ್ದರು.ಬಿಜೆಪಿಯವರು ಭ್ರಷ್ಟಾಚಾರದ ಹಣದಿಂದ ಸಮಾವೇಶ ಮಾಡಿ ಜನರಿಗೆ ಬಿರಿಯಾನಿ ಊಟಾ ಹಾಕಿಸುತ್ತಿದ್ದಾರೆ.ಆದರೆ ಜನರು ಬಿರಿಯಾನಿ ತಿಂದು ಎದ್ದು ಹೋಗುತ್ತಿದ್ದಾರೆ.ಆಮೇಲೆ ಬಿಜೆಪಿಯವರು ಖಾಲಿ ಚೇರ್ ಗಳಿಗೆ ಭಾಷಣ ಮಾಡುತ್ತಿದ್ದಾರೆ.ಇದು ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವ್ಯಂಗ್ಯವಾಡಿದರು.ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಕಣ್ಣೀರು ಒರೆಸುತ್ತೇವೆಂದು ಉಚಿತವಾಗಿ ಗ್ಯಾಸ್ ಸಿಲಿಂಡರ್ ಕೊಟ್ಟು ತದನಂತರ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಿಸಿದ್ದಾರೆ.ಕಿಸಾನ್ ಸಮ್ಮಾನ ಹೆಸರಿನಲ್ಲಿ ರೈತರಿಗೆ ಎಕರೆಗೆ 6000 ಹಣ ಕೊಟ್ಟು ಬೇರೆಡೆಯಿಂದ 60000 ಹಣ ಪಡೆದಿದ್ದಾರೆ.ಇದೀಗ ವಿದ್ಯುತ್ ಖಾಸಗೀಕರಣಗೊಳಿಸಿ ರೈತರಿಗೆ ಕೊಡುವ ಉಚಿತ ವಿದ್ಯುತ್ ಅನ್ನು ಹೊಡೆಯುವ ಹುನ್ನಾರ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.ಕಾಂಗ್ರೆಸ್ ಪಕ್ಷ ವಿಶೇಷವಾಗಿ ಹಿಂದೂಳಿದ ಜನರ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸುತ್ತದೆ.ಅದೇ ಬಿಜೆಪಿ ಜಾತಿ ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ.ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ.ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯೋಗ ಮೇಳ ಕಾರ್ಯಕ್ರಮ!

Tue Dec 13 , 2022
ಬದಲಾದ ಜಾಗತಿಕ ಕಾಲಘಟ್ಟಕ್ಕೆ ಅನುಗುಣವಾಗಿ ಕೌಶಲಗಳು ಬದಲಾಗಬೇಕಾಗಿದೆ. ಶಿಕ್ಷಣ ವ್ಯವಸ್ಥೆ ಬದಲಾಗಬೇಕಾಗಿದೆ. ಕೌಶಲಾಧಾರಿತ ಶಿಕ್ಷಣ ವ್ಯವಸ್ಥೆ ಜಾರಿಗೆ ಬಂದರೆ ಗ್ರಾಮೀಣ ವಿದ್ಯಾರ್ಥಿಗಳು ಉದ್ಯೋಗಾವಕಾಶ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮುನಿಸಿಪಲ್ ಮಹಾವಿದ್ಯಾಲಯದ ಆವರಣದಲ್ಲಿ ಕೌಶಲಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಹಾಗೂ ನಗರ ಪ್ರದೇಶಗಳ ಶಿಕ್ಷಣ ವ್ಯವಸ್ಥೆಯಲ್ಲಿಬಹಳ ವ್ಯತ್ಯಾಸವಿದೆ. ಇಂತಹ […]

Advertisement

Wordpress Social Share Plugin powered by Ultimatelysocial