ಕಾಂಗ್ರೆಸ್ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ.

 

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.ವಿಪಕ್ಷ ನಾಯಕ ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಸಿಎಂ ನಿವಾಸದತ್ತ ದೌಡಾಯಿಸಿದ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದು, ಈ ವೇಳೆ ರಸ್ತೆ ಮಧ್ಯೆಯೇ ಕುಳಿತು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಆರೋಗ್ಯ ಇಲಾಖೆಯ NHM ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ.

Sat Mar 4 , 2023
  ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರವ ಗುತ್ತಿಗೆ ನೌಕರರಿಗೆ ಸಂಭಾವನೆ (Remuneration ) ಅನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಿದೆ ಎಂದಿದ್ದಾರೆ.ಇನ್ನೂ ಶೇ.15ರಷ್ಟು ವೇತನ ಹೆಚ್ಚಳದ ಆದೇಶವು ಒಳಗುತ್ತಿಗೆ, […]

Advertisement

Wordpress Social Share Plugin powered by Ultimatelysocial