ಕಾಂಗ್ರೆಸ್ ಧರಣಿಗೆ ಟಾಂಗ್ ನೀಡಿದ ಸಚಿವ ಆರ್.ಅಶೋಕ್

 

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನ ಎಲ್ಲರೂ ಬಿಜೆಪಿಗೆ ಬಂದು ಬಿಡಲಿ, ನಂತರ ಬಿಜೆಪಿಗೆ ಸಲಹೆ ನೀಡಲಿ ಎಂದು ಟಾಂಗ್ ನೀಡಿದ್ದಾರೆ.ಉಡುಪಿಯ ಕೆಂಜೂರಿನಲ್ಲಿ ಮಾತನಾಡಿದ ಸಚಿವರು, ಕಲಾಪ ನಡೆಸಲು ಬಿಡದೇ ಸದನದಲ್ಲಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾವೇ ಕಿವಿ ಹಿಂಡಬೇಕಾದ ಸ್ಥಿತಿ ಬಂದಿದೆ. ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಬೇಕಿದೆ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಕಿವಿ ಹಿಂಡಬೇಕು ಅದನ್ನು ಬಿಟ್ಟು ಸದನದಲ್ಲಿ ಯಾವುದೇ ವಿಷಯ ಪ್ರಸ್ತಾಪಿಸದೇ ಅನಗತ್ಯವಾಗಿ ಪ್ರತಿಭಟನೆ ನಡೆಸಿದರೆ ಹೇಗೆ? ತಿಂಗಳಿಗೆ ಎರಡು ಲಕ್ಷ ಸರ್ಕಾರದ ಸಂಬಳ ಪಡೆಯುತ್ತಾ ಸದನದಲ್ಲಿ ಅಹೋರಾತ್ರಿ ಧರಣಿ ಎಂದು ಹೇಳಿ ಆಟವಾಡುತ್ತಾ, ಗೊರಕೆ ಹೊಡೆಯುತ್ತಾ ಕುಳಿತರೆ ವಿಪಕ್ಷ ನಾಯಕರ ಜವಾಬ್ದಾರಿ ಎನ್ನಬೇಕೇ? ಇದು ಯಾವ ರೀತಿ ವಿಪಕ್ಷ? ಎಂದು ಕಿಡಿಕಾರಿದರು.ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸುತ್ತಿರುವ ಕಾಂಗ್ರೆಸ್ ನಾಯಕರ ಧೋರಣೆ ಟೀಕಿಸಿದ ಸಚಿವ ಆರ್.ಅಶೋಕ್, ಕಾಂಗ್ರೆಸ್ ಪಕ್ಷವೇ ಬಹಳ ಗೊಂದಲದಲ್ಲಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಒಡಕು ಬೀದಿಯಲ್ಲಿದೆ. ಇವರ ಕಿತ್ತಾಟಕ್ಕೆ ಹಿಜಾಬ್ ವಿವಾದ ಚರ್ಚೆಗೆ ಬರದಂತೆ ಮಾಡಿ ಈಶ್ವರಪ್ಪ ಹೇಳಿಕೆ ಹಿಡಿದುಕೊಂಡಿದ್ದಾರೆ. ಈಶ್ವರಪ್ಪ ಅವರನ್ನು ನೇಮಕ ಮಾಡಿದ್ದು ಬಿಜೆಪಿ. ಕಾಂಗ್ರೆಸ್ ಪಕ್ಷದ ಎಲ್ಲರೂ ಬಿಜೆಪಿಗೆ ಸೇರಿಕೊಂಡು ಬಿಡಲಿ. ಆಮೇಲೆ ಬಿಜೆಪಿಗೆ ಸಲಹೆ ಕೊಡಲಿ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು.?

Tue Feb 22 , 2022
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ, ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಮುಂಚೂಣಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಫೆಬ್ರವರಿ 25ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.ಈ ಕುರಿತು ಮಾತನಾಡಿರುವ ಡಿ,ಕೆ. ಶಿವಕುಮಾರ್, ನಾನು ಕೆ.ಪಿ.ಸಿ.ಸಿ. ಅಧ್ಯಕ್ಷನಾದ ಬಳಿಕ ಎಲ್ಲರನ್ನು ಕರೆದುಕೊಂಡು […]

Advertisement

Wordpress Social Share Plugin powered by Ultimatelysocial