ಕೇಸರಿಕರಣಕ್ಕಾಗಿ ಎನ್ ಇಪಿ ಜಾರಿಮಾಡಿದ್ದಾರೆ;ರಮೇಶ್ ಆಪ್ತರು ನನ್ನ ಭೇಟಿ ಮಾಡಿದ್ದು ನಿಜ: ಡಿ ಕೆ ಶಿವಕುಮಾರ್‌

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ ಸೀಮೆ ಶಿಕ್ಷಣ ವ್ಯವಸ್ಥೆ ತರಲು ಹೊರಟಿದ್ದಾರೆ. ಗುರುಕುಲ ಸಂಸ್ಕೃತಿ ಎನ್ನುತ್ತಾರಲ್ಲಾ, ಇಷ್ಟು ದಿನ ನಮ್ಮಲ್ಲಿದ್ದ ಶಿಕ್ಷಣ ವ್ಯವಸ್ಥೆ ಏನಾಗಿದೆ? ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಇಡೀ ವಿಶ್ವದ ಆರ್ಥಿಕತೆ ಕುಸಿದುಬಿದ್ದರೂ ಭಾರತದ ಆರ್ಥಿಕತೆ ಬಿದ್ದಿರಲಿಲ್ಲ. ಅಂತಹ ಶಿಕ್ಷಣ ಬೇಡವೇ? ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಓದಿದ ಡಾಕ್ಟರ್, ಇಂಜಿನಿಯರ್ ಗಳು ವಿಶ್ವದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ಸರಿ ಇಲ್ಲವೇ? ಇವರು ದಿನಬೆಳಗಾದರೆ ತಮ್ಮ ವಿಚಾರಧಾರೆಯನ್ನು ಮಕ್ಕಳ ತಲೆಗೆ ತುಂಬಲು ಈ ರೀತಿ ಮಾಡುತ್ತಿದ್ದಾರೆ.

ಈ ಶಿಕ್ಷಣ ನೀತಿ ಜಾರಿಗೆ ತರುವುದೇ ಆದರೆ, ಸಂಸತ್ತಿನಲ್ಲಿ ಯಾಕೆ ಚರ್ಚೆಯಾಗಿಲ್ಲ? ವಿಧಾನಮಂಡಲ ಅಧಿವೇಶನದಲ್ಲಿ ಯಾಕೆ ಚರ್ಚೆಯಾಗಿಲ್ಲ? ಈ ವಿಚಾರವಾಗಿ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಪೋಷಕರಲ್ಲಿ ಅರಿವು ಮೂಡಿಸುತ್ತೇವೆ. ನಾನು ರಾಜಕಾರಣಿಯಷ್ಟೇ ಅಲ್ಲ. ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ನಾನು ಇದನ್ನು ಆಳವಾಗಿ ಅಧ್ಯಯನ ಮಾಡಿದ್ದೇನೆ. ಇದರಲ್ಲಿ ಒಂದೆರಡು ಒಳ್ಳೆಯ ಅಂಶಗಳಿರಬಹುದು, ಆದರೆ ಇದು ಸ್ಪಷ್ಟವಾಗಿ ಕೇಸರಿಕರಣದ ಪ್ರಯತ್ನ.

ಇದು ಒಳ್ಳೆಯ ನೀತಿಯಾಗಿದ್ದರೆ ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಗುಜರಾತಿನಲ್ಲಿ ಜಾರಿಗೊಳಿಸಲು ಹೇಳಿ. ಬೇರೆ ರಾಜ್ಯಗಳಲ್ಲಿ ಮಾಡಲಾಗದ್ದನ್ನು ನಮ್ಮಲ್ಲಿ ಮಾಡಿದ್ದೇನೆ ಎಂದು ಹೈಕಮಾಂಡ್ ಓಲೈಸಲು ಹೊರಟಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಲು ಬಿಡುವುದಿಲ್ಲ. ಇದರ ವಿರುದ್ಧ ಚಳವಳಿ, ಆಂದೋಲನ ಮಾಡುತ್ತೇವೆ.

ಎರಡೂ ಕ್ಷೇತ್ರಗಳಲ್ಲಿ ನಮಗೆ ಉತ್ತಮ ಬೆಂಬಲ:

ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿದ್ದಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ. ನಾವು ನಿತ್ಯ ಆಂತರಿಕ ವರದಿ ಪಡೆಯುತ್ತಿರುತ್ತೇವೆ. ಮುಖ್ಯಮಂತ್ರಿಗಳಿಗೂ ನಿತ್ಯ ವರದಿ ಹೋಗುತ್ತಿರುತ್ತದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ಮಾಹಿತಿಯೇ ಮುಖ್ಯಮಂತ್ರಿಗಳಿಗೆ ರವಾನೆಯಾದ ವರದಿಯಲ್ಲೂ ಇದೆ.

ರಮೇಶ್ ಆಪ್ತರು ನನ್ನ ಭೇಟಿ ಮಾಡಿದ್ದು ನಿಜ:

 

 

ರಮೇಶ್ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್‌.

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಆರ್.ಅಶೋಕ್ ವಿರುದ್ಧ ವಿ.ಸೋಮಣ್ಣ  ಗರಂ;ಉಸ್ತುವಾರಿಯನ್ನು ನೀಡುವಾಗ ಮುಖ್ಯಮಂತ್ರಿಗಳು ಜೇಷ್ಠತೆಯನ್ನು ಪರಿಗಣಿಸಬೇಕು;ಸಚಿವ ವಿ.ಸೋಮಣ್ಣ

Sat Oct 9 , 2021
ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಸಚಿವ ಆರ್.ಅಶೋಕ್ ವಿರುದ್ಧ ವಿ.ಸೋಮಣ್ಣ  ಗರಂ ಆಗಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಬೆಂಗಳೂರು ಉಸ್ತುವಾರಿಯನ್ನು ನೀಡುವಾಗ ಮುಖ್ಯಮಂತ್ರಿಗಳು ಜೇಷ್ಠತೆಯನ್ನು ಪರಿಗಣಿಸಬೇಕು. ಉಸ್ತುವಾರಿ ಸಿಎಂ ಬಳಿಯೇ ಇದ್ದರೆ ನಮ್ಮ ಅಭ್ಯಂತರವಿಲ್ಲ, ಆದರೆ ಬೇರೆಯವರಿಗೆ ಕೊಟ್ಟರೆ ನನ್ನನ್ನು ಪರಿಗಣಿಸಬೇಕು ನಾನು ಬೆಂಗಳೂರಿಗೆ ಹಿರಿಯ ಸಚಿವ ಎಂಬುದನ್ನು ಹೇಳಿದ್ದೇನೆ .. ಬೆಂಗಳೂರಿನ ಉಸ್ತುವಾರಿ ಮಾಡಲು ಯಾರ ಅನುಭವ ಏನು […]

Advertisement

Wordpress Social Share Plugin powered by Ultimatelysocial