ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿವ ಜಾವ ನಿಧನರಾಗಿದ್ದಾರೆ.ನಿಂಗಮ್ಮ ಅವರಿಗೆ (106) ವರ್ಷಗಳಾಗಿದ್ದವು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹಿಂದುಳಿದ ವರ್ಗಗಳ ಆಯೋಗವು ವರದಿ ಮೇಲೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ:ಸಿಎಂ ಬೊಮ್ಮಾಯಿ 

Fri Dec 17 , 2021
ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ […]

Advertisement

Wordpress Social Share Plugin powered by Ultimatelysocial