ಪೊಲೀಸ್ ಇಲಾಖೆಗೆ ಸಿಕ್ಕ ಕೊಡುಗೆಗಳು

ಬೆಂಗಳೂರು, ಫೆಬ್ರವರಿ 17; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದರು.

ಬಜೆಟ್‌ನಲ್ಲಿ ಪೊಲೀಸ್ ಇಲಾಖೆ, ಕಾರಾಗೃಹ ಸೇರಿದಂತೆ ರಕ್ಷಣಾ ವಲಯಕ್ಕೆ ಹಲವಾರು ಘೋಷಣೆ ಮಾಡಿದರು.

ಶುಕ್ರವಾರ ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಹಂತಗಳಲ್ಲಿ ಹೆಚ್ಚುವರಿಯಾಗಿ 2,000 ಹುದ್ದೆಗಳನ್ನು ಸೃಜಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹೊಸದಾಗಿ 4 ಸಂಚಾರಿ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಂಗಳೂರಿನಲ್ಲಿ 9 ಕಾನೂನು ಮತ್ತು ಸುವ್ಯವಸ್ಥೆ, 5 ಸಂಚಾರಿ, 6 ಮಹಿಳಾ ಪೊಲೀಸ್ ಠಾಣೆಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡಿದರು.

ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ವೆಬ್‌ಸೈಟ್‌ಗಳು, ಆನ್‌ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನ ಒಳಗೊಂಡ 24X7 ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದರು.

ಪೊಲೀಸ್ ಇಲಾಖೆಗೆ ಘೋಷಣೆಗಳು

ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಗಳು 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ನೂತನ ಪೊಲೀಸ್ ಕಛೇರಿಗಳು, ಪೊಲೀಸ್ ಠಾಣೆಗಳ ನಿರ್ಮಾಣ, ಉನ್ನತೀಕರಣ ಮತ್ತು ಆಧುನೀಕರಣಕ್ಕೆ 348 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದೇ ರೀತಿ 410 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ ಮತ್ತು 51 ಕೋಟಿ ರೂ. ಗಳ ವೆಚ್ಚದಲ್ಲಿ ಕಾರಾಗೃಹ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ 240 ಕೋಟಿ ರೂ. ಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿರುತ್ತದೆ. ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಘೋಷಣೆ ಮಾಡಿದರು.

ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ

ಮಖ್ಯಮಂತ್ರಿಗಳು ಬಜೆಟ್‌ನಲ್ಲಿ ಪೊಲೀಸ್ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಅತ್ಯಂತ ಮಹತ್ತರ ಹೆಜ್ಜೆಯನ್ನಿಟ್ಟಿದ್ದು, ಪೊಲೀಸ್ ಗೃಹ 2025 ಯೋಜನೆಯಡಿ 2022-23ನೇ ಸಾಲಿನಲ್ಲಿ 250 ಕೋಟಿ ರೂ. ಗಳನ್ನು ಒದಗಿಸಲಾಗಿದ್ದು, ಪ್ರಸಕ್ತ ವರ್ಷ 450 ಕೋಟಿ ರೂ. ಗಳನ್ನು ಒದಗಿಸುವುದರ ಮೂಲಕ 3,000 ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ ಈಗಾಗಲೇ 8 ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ವರದಿಗಾಗಿ ಕಾಯುವ ಅವಧಿಯನ್ನು ಎರಡು ವರ್ಷಗಳಿಂದ ಒಂದು ತಿಂಗಳಿಗೆ ಇಳಿಸಲಾಗಿದೆ. ಪ್ರಸಕ್ತ ವರ್ಷ 10 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಧಾರವಾಡದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದರು.

ಇಲಾಖೆಗೆ ಹೊಸ ವಾಹನಗಳ ಸೇರ್ಪಡೆ

ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯ ಹಳೆಯ ಮತ್ತು ಅನುಪಯುಕ್ತ ವಾಹನಗಳನ್ನು ಹಂತ ಹಂತವಾಗಿ ಬದಲಾಯಿಸಿ ಹೊಸ ವಾಹನಗಳನ್ನು ಇಲಾಖೆಗೆ ಸೇರ್ಪಡೆಗೊಳಿಸಲು ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದರು.

ಕಾರಾಗೃಹದಲ್ಲಿನ ಬಂದಿಗಳ ಅಭ್ಯುದಯಕ್ಕಾಗಿ ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದೆ. ಬಂದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಬಂದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿರುತ್ತದೆ ಎಂದು ಹೇಳಿದರು.

ಕಾರಾಗೃಹಗಳಲ್ಲಿನ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಈ ಆಸ್ಪತ್ರೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗುತ್ತಿದೆ. ವಿಜಯಪುರ, ಬೀದರ್, ಮಂಗಳೂರು ಮತ್ತು ಬೆಂಗಳೂರು ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಗರಿಷ್ಠ ಭದ್ರತಾ ಕಾರಾಗೃಹ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಕಾರಾಗೃಹ ಸಾಮರ್ಥ್ಯ 4,000 ರಷ್ಟು ಹೆಚ್ಚಾಗಿರುತ್ತದೆ ರಾಜ್ಯದ ಉಳಿದ ಕಾರಾಗೃಹಗಳಲ್ಲಿಯೂ ಸಹ 1465 ಬಂದಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮವಹಿಸಲಾಗಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರದ ನಕಲಿ ಗುರುತಿನ ಚೀಟಿಗಳನ್ನ ಸೃಷ್ಟಿಸಿಕೊಂಡು ವಂಚನೆ.

Fri Feb 17 , 2023
ಕೇಂದ್ರ ಸರ್ಕಾರದ ನಕಲಿ ಗುರುತಿನ ಚೀಟಿಗಳನ್ನ ಸೃಷ್ಟಿಸಿಕೊಂಡು ವಂಚನೆ. ಐಡಿ ಕಾರ್ಡ್ ತೋರಿಸಿ ಕೆಲಸ ಕೊಡಿಸುವುದಾಗಿ ಮೋಸ. ಇತ್ತೀಚಿಗೆ ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ. ಎರಡು ಲಕ್ಷ ಹಣ ಪಡೆದು ವಂಚನೆ. ಕೇಂದ್ರ ಸರ್ಕಾರದ ಕೆಲಸ ಕೊಡಿಸುವುದಾಗಿ ಆಮಿಷ. ತಾನು ನ್ಯಾಷನಲ್ ಕ್ರೈಮ್ ಬ್ಯೂರೋ ಆಫ್ ಇನ್ವೆಸ್ಟೀಗೇಷನ್ ಸೌತ್ ಇಂಚಾರ್ಜ್ ಎಂದು ಹೇಳಿಕೊಂಡಿದ್ದ ಅಸಾಮಿ. ಆಂಟಿ ಕರೆಪ್ಷನ್ ಬ್ಯೂರೋದಲ್ಲಿ ನ್ಯಾಷನಲ್ ಡೈರೆಕ್ಟರ್ ಎಂದು ಗುರುತಿನ ಚೀಟಿ. ನಕಲಿ ಗುರುತಿನ ಚೀಟಿ […]

Advertisement

Wordpress Social Share Plugin powered by Ultimatelysocial