‘ಕೂರ್ಗ್ ವರ್ಷದ ವ್ಯಕ್ತಿ 2022’ ಆಗಿ ನಟಿ ರಶ್ಮಿಕಾ ಮಂದಣ್ಣ ಆಯ್ಕೆ

ಕೊಡಗು ಮೂಲದ ನ್ಯೂಸ್ ಪೋರ್ಟಲ್ ಕೂರ್ಗ್ ಟೂರಿಸಂ ಇನ್ಫೋಂ’ 2022ರ ವರ್ಷದ ಕೊಡಗಿನ ವ್ಯಕ್ತಿಯಾಗಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರು: ಕೊಡಗು ಮೂಲದ ನ್ಯೂಸ್ ಪೋರ್ಟಲ್ ಕೂರ್ಗ್ ಟೂರಿಸಂ ಇನ್ಫೋಂ’ 2022ರ ವರ್ಷದ ಕೊಡಗಿನ ವ್ಯಕ್ತಿಯಾಗಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದೆ.ವಾರ್ಷಿಕ ಸಮೀಕ್ಷೆ ಮೂಲಕ ಸಮುದಾಯದ ಹೆಸರಾಂತ ನಾಯಕರ ಗುಣಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಲೇಖಕ ಪಿಟಿ ಬೊಪ್ಪಣ್ಣ ಅವರಿಂದ 2005ರಲ್ಲಿ ಆರಂಭವಾದ ಈ ಪೋರ್ಟಲ್ ಸ್ಥಾಪಿಸಿದರು. ಇಂದಿನ ಯುವ ಪೀಳಿಗೆಯಲ್ಲಿ ಅನೇಕ ಉತ್ಸಾಹಿ, ತರುಣ ಜನರಿದ್ದು, ಅವರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಬೊಪಣ್ಣ ಹೇಳುತ್ತಾರೆ. 2016ರಲ್ಲಿ ಕಿರಿಕ್ ಪಾರ್ಟಿ ಮೂಲಕ ಚೊಚ್ಚಲ ಬಾರಿಗೆ ಚಿತ್ರರಂಗ ಪ್ರವೇಶಿಸಿದ ವಿರಾಜ ಪೇಟೆಯ ರಶ್ಮಿಕಾ ಮಂದಣ್ಣ, ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹು ಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ರಕ್ಷಿತ್ ಶೆಟ್ಟಿ, ಪುನೀತ್ ರಾಜ್ ಕುಮಾರ್, ಅಮಿತಾಬ್ ಬಚ್ಚನ್, ಅಲ್ಲು ಅರ್ಜುನ್, ದಳಪತಿ ವಿಜಯ್ ಅವರಂತಹ ಖ್ಯಾತ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿರ್ದೇಶಕ ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ - ರೋಮ್ಯಾಂಟಿಕ್ ಸಬ್ಜೆಕ್ಟ್ ಚಿತ್ರದಲ್ಲಿ ದೊಡ್ಮನೆ ಹುಡುಗ

Thu Jan 5 , 2023
‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ […]

Advertisement

Wordpress Social Share Plugin powered by Ultimatelysocial