ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 83 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,16,755 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 21,530 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,499 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,78,087 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 29,82,451 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,55,75,126 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,91,425 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

4 ದಿನಗಳಿಂದ ನಗರದಿಂದ ಅಂಬೆಗಾಲಿಡುವ ನಾಪತ್ತೆ, ಪೊಲೀಸರ ಸುಳಿವಿಲ್ಲ!

Fri Mar 25 , 2022
ಗೋಮತಿಪುರದಿಂದ ಕಳೆದ ನಾಲ್ಕು ದಿನಗಳಿಂದ ಒಂದೂವರೆ ವರ್ಷದ ಹೆಣ್ಣು ಮಗು ನಾಪತ್ತೆಯಾಗಿದೆ. ಮತ್ತು ಅಂಬೆಗಾಲಿಡುವ ಮಗು ಎಲ್ಲಿ ನಾಪತ್ತೆಯಾಗಿದೆ ಎಂಬ ಬಗ್ಗೆ ಪೊಲೀಸರಿಗೆ ಸುಳಿವಿಲ್ಲ. ಮಗುವಿನ ಪತ್ತೆಗೆ ಕ್ರೈಂ ಬ್ರಾಂಚ್ ನಾಲ್ಕು ತಂಡಗಳನ್ನು ರಚಿಸಿದೆ, ಆದರೆ ಇದುವರೆಗೆ ಯಾವುದೇ ಪ್ರಗತಿ ಸಾಧಿಸಿಲ್ಲ. ವಿಪರ್ಯಾಸವೆಂದರೆ, ನಗರದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿದ್ದರೂ, ಮಗು ನಾಪತ್ತೆಯಾದ ಗೋಮತಿಪುರದ ಅಪರೆಲ್ ಪಾರ್ಕ್ ಬಳಿ ಯಾವುದೂ ಇಲ್ಲ. ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರ ಕಾರ್ಯವನ್ನು ಹೆಚ್ಚು […]

Advertisement

Wordpress Social Share Plugin powered by Ultimatelysocial