24 ಗಂಟೆಯಲ್ಲಿ ಹೊಸದಾಗಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು..?

 

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 33 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524572 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 16308 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2158 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42609335 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 14,39,466 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,13,41,918 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,47,637 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಡೆಲ್‌ಗಳ ಸರಣಿ ಸಾವಿಗೆ ಬೆಚ್ಚಿ ಬಿದ್ದ ಕೊಲ್ಕತ್ತ:

Sat May 28 , 2022
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮಾಡೆಲ್‌ಗಳ ಸರಣಿ ಸಾವಾಗುತ್ತಿದೆ. ಕೇವಲ ಎರಡು ವಾರದಲ್ಲಿ ಮೂರು ಮಂದಿ ಮಾಡೆಲ್‌ಗಳು ಅನುಮಾನ್ಪದವಾಗಿ ಸಾವನ್ನಪ್ಪಿದ್ದಾರೆ. ಹನ್ನೆರಡು ದಿನದ ಹಿಂದೆ ಬೆಂಗಾಲಿ ಟಿವಿ ಲೋಕದಲ್ಲಿ ಚಿರಪರಿಚಿತ ನಟಿಯಾಗಿದ್ದ ಪಲ್ಲವಿ ಡೇ ಸಾವನ್ನಪ್ಪಿದರು. ಕೊಲ್ಕತ್ತದ ಗರ್ಫಾದಲ್ಲಿರುವ ಅವರ ಅಪಾರ್ಟ್‌ಮೆಂಟ್‌ನಲ್ಲಿ ಪಲ್ಲವಿ ಡೇಯ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು. ನಟಿಯ ಸಾವಿನ ಬಗ್ಗೆ ಬೆಂಗಾಳಿ ಸಿನಿಮಾ ಹಾಗೂ ಟಿವಿ ಲೋಕ ಶೋಕ ವ್ಯಕ್ತಪಡಿಸಿತ್ತು. ಅದಾದ ಹತ್ತು ದಿನದ […]

Advertisement

Wordpress Social Share Plugin powered by Ultimatelysocial