ಮಲ್ಲೇಶ್ವರಂನಲ್ಲಿ ಕೊರೋನಾ ಬ್ಲಾಸ್ಟ್, 15 ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪಾಸಿಟಿವ್..!

ಬೆಂಗಳೂರು, ಮಾ.18- ಮಲ್ಲೇಶ್ವರಂ ಹಾಸ್ಟೆಲ್ ಒಂದರ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. 53 ವಿದ್ಯಾರ್ಥಿಗಳಿರುವ ಹಾಸ್ಟೆಲ್ನ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಿದಾಗ 15 ವಿದ್ಯಾರ್ಥಿಗಳಲ್ಲಿ ಸೋಂಕಿರುವುದು ಪತ್ತೆಯಾಗಿದೆ.ಸಮುದಾಯಕ್ಕೆ ಸೇರಿದ ಹಾಸ್ಟೆಲ್ನಲ್ಲಿ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 53 ವಿದ್ಯಾರ್ಥಿಗಳಿದ್ದರು.

15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾದ ನಂತರ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಕಾರಿಗಳು ಸ್ಥಳಕ್ಕೆ ದೌಡಾಯಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಸೋಂಕು ಕಾಣಿಸಿಕೊಂಡ 15 ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕವಿರಿಸಿಕೊಂಡಿರುವವರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ.

 

ಹಾಸ್ಟೆಲ್ನ ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಇಡೀ ಕಟ್ಟಡವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ. ಹಾಸ್ಟೆಲ್ನಲ್ಲಿದ್ದ ಕೆಲ ವಿದ್ಯಾರ್ಥಿಗಳಿಗೆ ನಾಳೆ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಸೋಂಕು ತಗುಲಿರುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರು ಶಾಲಾ-ಕಾಲೇಜುಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಸೋಂಕಿತರು ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.ಮುಂಜಾಗ್ರತಾ ಕ್ರಮವಾಗಿ ಇಡೀ ಹಾಸ್ಟೆಲ್ ಕಟ್ಟಡವನ್ನು ಸ್ಯಾನಿಟೈಸರ್ ಮಾಡಲಾಗಿದೆ. ಕಟ್ಟಡದ ಅಕ್ಕಪಕ್ಕದ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೂ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಗುರು ವೈಭೋತ್ಸವ ‘ಅಭಿವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ನಟ ದರ್ಶನ್

Thu Mar 18 , 2021
  ಮಂತ್ರಾಲಯದ ಶ್ರೀರಾಘವೇಂದ್ರ ಗುರು ವೈಭೋತ್ಸವ ‘ಅಭಿವಂದನೆ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ನಟ ದರ್ಶನ್ ಅವರನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.’ರಾಬರ್ಟ್’ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ನಟ ದರ್ಶನ್  ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ್ದಾರೆ. ರಾಯರ ಮಠದಲ್ಲಿ ಇಂದು ನಡೆದ ವೈಭವೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಭಾಗವಹಿಸಿದ್ದರು, ಮಠದ ವತಿಯಿಂದ ದರ್ಶನ್ ಅವರಿಗೆ ಸನ್ಮಾನ ಸಹ ಮಾಡಲಾಯಿತು. ಕಾರ್ಯಕ್ರಮದ ನಂತರ ಎದುರಾದ ಮಾಧ್ಯಮದವರೊಟ್ಟಿಗೆ ಚುಟುಕಾಗಿ ಮಾತನಾಡಿದ […]

Advertisement

Wordpress Social Share Plugin powered by Ultimatelysocial