ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು,

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ. ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,83,122ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,741ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,764ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 147 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,49,949ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,55,731 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91,59,40,956 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,54,43,282 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬೇಡ್ಕರ್ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ.

Fri Feb 3 , 2023
ಚಿಕ್ಕಬಳ್ಳಾಪುರ, ಫೆಬ್ರವರಿ 3: ಚಿಕ್ಕಬಳ್ಳಾಪುರ ನಗರದ 30ನೇ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಕಸ ವಿಲೇವಾರಿ ವ್ಯವಸ್ಥೆ ಹಳಿ ತಪ್ಪಿದ್ದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಅಂಬೇಡ್ಕರ್ ನಗರದಲ್ಲಿ ಆರ್ಥಿಕವಾಗಿ ಹಿಂದುಳಿದ ಕೆಲವು ಕುಟುಂಬಳು ವಾಸವಿದ್ದು, ಅಧಿಕಾರಿಗಳು ಸಕಾಲದಲ್ಲಿ ಕಸ ವಿಲೇವಾರಿ ಮಾಡುತ್ತಿಲ್ಲ. ಹೀಗಾಗಿ ನಿವಾಸಿಗಳು ಕಸವನ್ನು ಎಲ್ಲಂದರಲ್ಲಿ ರಾಶಿ ಹಾಕುತ್ತಿದ್ದಾರೆ. ಇನ್ನು ಅಂಗಡಿ, ಹೋಟೆಲ್ ಮಾಲೀಕರು ವೈದ್ಯನಿಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ. ತಂದು ಚರಂಡಿ ಸುರಿಯುತ್ತಿದ್ದಾರೆ ಎಂದು ಬಡಾವಣೆಯ […]

Advertisement

Wordpress Social Share Plugin powered by Ultimatelysocial