ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 2,202 ಹೊಸ ಕೇಸ್ ಪತ್ತೆ, 27 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,202 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,23,801ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,241ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17317ಕ್ಕೆ ಇಳಿಕೆಯಾಗಿದೆಈ ನಡುವೆ ಕಳೆದ 24 ಗಂಟೆಗಳಲ್ಲಿ 2,550ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,82,243ಕ್ಕೆ ತಲುಪಿದೆ.ಇನ್ನು ಭಾರತದಲ್ಲಿ ಒಂದೇ 4,05,156 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84,38,36,914 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,37,34,314 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ನೆಲನೆಲ್ಲಿಯ ಶಕ್ತಿ!

Mon May 16 , 2022
ಸಾಮಾನ್ಯವಾಗಿ ನೆಲ್ಲಿ ಬಗ್ಗೆ ಎಲ್ಲರಿಗೂ ಗೊತ್ತಿರುತ್ತೆ. ಆದ್ರೆ ನೆಲನೆಲ್ಲಿ ಬಗ್ಗೆ ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ಕೆಲವರಿಗೆ ಗೊತ್ತಿದ್ದರೂ ಅದನ್ನು ನೋಡಿರೋದಿಲ್ಲ. ಬಹುತೇಕರಿಗೆ ಅದರ ಔಷಧೀಯ ಗುಣಗಳ ಪರಿಚಯವೂ ಇರೋದಿಲ್ಲ. ನೆಲ್ಲಿಯ ಎಲೆಗಳನ್ನೇ ಹೋಲುವುದರ ಜೊತೆಗೆ, ನೆಲ್ಲಿ ಕಾಯಿಯನ್ನು ಹೋಲುವ, ಸಾಸಿವೆ ಗಾತ್ರದ ಕಾಳುಗಳು ಎಲೆಯ ಹಿಂಬದಿಗೆ ಅಂಟಿ ಕೊಂಡಿರುತ್ತವೆ. ಹಾಗಾಗಿ, ಈ ಗಿಡ (Plant) ಕ್ಕೆ ನೆಲ ನೆಲ್ಲಿ ಎಂಬ ಹೆಸರು. ಹಸಿರು-ಕೆಂಪು ಮಿಶ್ರಿತ ಕಾಂಡದ ಈ ಗಿಡವು ಸಂಸ್ಕೃತ (Sanskrit) […]

Advertisement

Wordpress Social Share Plugin powered by Ultimatelysocial