ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು,

 

ನವದೆಹಲಿದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2000ಕ್ಕೂ ಅಧಿಕ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 2,380 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 56 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 522062 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 13433 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1231 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42514479 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,87,07,08,111 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 15,47,288 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,49,114 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಬ್ರಹ್ಮೋಸ್ ಕ್ಷಿಪಣಿಯ 'ಡಬಲ್ ಹಿಟ್' ಪರೀಕ್ಷಾರ್ಥ ಪ್ರಯೋಗ ಯಶಸ್ವಿ

Thu Apr 21 , 2022
ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ. ಭಾರತೀಯ ವಾಯುಪಡೆ ಯುದ್ಧ ನೌಕೆ ಮತ್ತು ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದ್ದು, ಎರಡೂ ಪರೀಕ್ಷೆಯಲ್ಲಿ ಒಂದೇ ಗುರಿ ನಿಗದಿ ಪಡಿಸಲಾಗಿತ್ತು. ಎರಡೂ ಮಾರ್ಗದಲ್ಲಿ ಒಂದೇ ಗುರಿಯನ್ನು ಧ್ವಂಸ ಮಾಡುವಲ್ಲಿ ಕ್ಷಿಪಣಿ ಯಶಸ್ವಿಯಾಗಿದೆ. ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ […]

Advertisement

Wordpress Social Share Plugin powered by Ultimatelysocial