ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ 3 ವರ್ಷ ಜೈಲು-ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಕೊರೊನಾ ಸಾಂಕ್ರಮಿಕ ರೋಗದ  ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ  ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ.ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹೊಸ ಆದೇಶವನ್ನು ಹೊರಡಿಸಿದ್ದು ಕೊರೊನಾ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಕೋರೊನಾ ಪರೀಕ್ಷೆಗೆ ಒಳಪಡಬೇಕು ಎಂದು ತಿಳಿಸಿದೆ.

ಈ ಆದೇಶವನ್ನು ಕರ್ನಾಟಕ ಸಾಂಕ್ರಮಿಕ ರೋಗಿಗಳ ಸುಗ್ರೀವಾಜ್ಞೆ-2020 ರ 4 ನೇ ವಿಧಿಯಡಿ ವಿಧಿಸಲಾಗಿದ್ದು ಕೊರೊನಾ ರೋಗವು  ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಜ್ವರದ ಲಕ್ಷಣಗಳಿರುವ ವ್ಯಕ್ತಿಗಳು ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಕೊರೊನಾ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಸಿಬ್ಬಂದಿ, ಕಂಟೈನ್ ಮೆಂಟ್ ಮತ್ತು ಬಫರ್ ವಲಯದಲ್ಲಿನ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಸದ್ಯಕ್ಕೆ ಆರಂಭವಾಗೋಲ್ಲ ಶಾಲೆ..! -

Wed Oct 7 , 2020
ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ  ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಹೀಗಾಗಿ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸಲಾಗುತ್ತಾದಾ ಎಂಬ ಪ್ರಶ್ನೆ ಮೂಡಿತ್ತು.ಆದರೆ ತರಾತುರಿಯಲ್ಲಿ ಅಕ್ಟೋಬರ್ 15ರಿಂದ ಶಾಲಾ  ಕಾಲೇಜುಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ತೀರ್ಮಾನಿಸುವುದಿಲ್ಲ ಎಂದು ಹೇಳಲಾಗಿದೆ. ಹೀಗಾಗಿಯೇ ತಜ್ಞರು ಹಾಗೂ ಪೋಷಕರ ಜೊತೆ ಚರ್ಚೆಗಳನ್ನು ನಡೆಸಲಾಗುತ್ತಿದ್ದು, ಆ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ […]

Advertisement

Wordpress Social Share Plugin powered by Ultimatelysocial