ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆ

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 7,081 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 264 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಸದ್ಯಕ್ಕೆ ಒಟ್ಟು 83,913 ಸಕ್ರಿಯ ಪ್ರಕರಣಗಳಿವೆ.ಕಳೆದ ಮಾರ್ಚ್​ 2020 ರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.ಜೊತೆಗೆ ನಿನ್ನೆ 264 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ4,77,422 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 7,469 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,41,78,940 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.38 ರಷ್ಟಿದೆ.ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 1,37,46,13,252 ಕ್ಕೂ ಅಧಿಕ ಲಸಿಕಾ ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿ ಹೊಂದಿದೆ: ಪಿಯೂಷ್ ಗೋಯಲ್

Sun Dec 19 , 2021
ಈ ವರ್ಷ (2021-22) ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.ಇದಲ್ಲದೆ, ಹೇಳಿದ ರಫ್ತು ಗುರಿಯನ್ನು ಸಾಧಿಸಲು ಭಾರತಕ್ಕೆ ಸಹಾಯ ಮಾಡುವ ಹೊಸ ಮಾರುಕಟ್ಟೆಗಳ ಕುರಿತು ಮಾತನಾಡಿದ ಗೋಯಲ್,’ಯುನೈಟೆಡ್ ಅರಬ್ ಎಮಿರೇಟ್ಸ್ ಮಧ್ಯಪ್ರಾಚ್ಯ ಮತ್ತು ಆಫ್ರಿಕಾಕ್ಕೆ ಭಾರತೀಯ ವ್ಯಾಪಾರಕ್ಕೆ ಹೆಬ್ಬಾಗಿಲು ಆಗುತ್ತದೆ ಮತ್ತು ನಾವು ಟ್ಯಾಪ್ ಮಾಡಲು ಬೃಹತ್ ಇಂಡಿಯಾ ಮಾರ್ಟ್ ಅನ್ನು ಸ್ಥಾಪಿಸಬಹುದು ಎಂದು […]

Advertisement

Wordpress Social Share Plugin powered by Ultimatelysocial