ಕರ್ನಾಟಕದಲ್ಲಿ ಮತ್ತೆ 5 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಮತ್ತೆ 5 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿಯೇ ಮೊದಲ ಓಮಿಕ್ರಾನ್‌ ಪ್ರಕರಣ ಸಹ ರಾಜ್ಯದಲ್ಲಿಯೇ ದಾಖಲಾಗಿತ್ತು.ಸೋಮವಾರ ಬೆಳಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 19ರಂದು ರಾಜ್ಯದಲ್ಲಿ 5 ಹೊಸ ಓಮಿಕ್ರಾನ್ ಪ್ರಕರಣಗಳು ಖಚಿತವಾಗಿವೆ ಎಂದು ಹೇಳಿದ್ದಾರೆ. ಧಾರವಾಡ, ಭದ್ರಾವತಿ ಮತ್ತು ಮಂಗಳೂರಿನಲ್ಲಿ ತಲಾ ಒಂದು ಮತ್ತು ಉಡುಪಿಯಲ್ಲಿ 2 ಹೊಸ ಪ್ರಕರಣಗಳು ದಾಖಲಾಗಿವೆ.ಭಾರತದಲ್ಲಿ ಇದುವರೆಗೂ 11 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ 150 ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ 54 ಪ್ರಕರಣಗಳು ದಾಖಲಾಗಿವೆ.ಭಾನುವಾರದ ತನಕ ಕರ್ನಾಟಕದಲ್ಲಿ 14 ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣ ದಾಖಲಾಗಿತ್ತು. ಈಗ ಪುನಃ 5 ಹೊಸ ಪ್ರಕರಣ ಪತ್ತೆಯಾಗಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕತ್ರೀನಾ-ವಿಕ್ಕಿ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದು ಯಾಕೆ : ಅಕ್ಷಯ್ ಕುಮಾರ್!

Mon Dec 20 , 2021
ಬಾಲಿವುಡ್ ನಟ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಮೊನ್ನೆ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಡಿಸೆಂಬರ್ 9 ರಂದು ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‌ನಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರ ವಿವಾಹ ಮಹೋತ್ಸವ ಗ್ರ್ಯಾಂಡ್ ಆಗಿ ನಡೆಯಿತು. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರ ರಾಯಲ್ ವೆಡ್ಡಿಂಗ್‌ಗೆ ಕುಟುಂಬಸ್ಥರು ಹಾಗೂ ಚಿತ್ರರಂಗದ ಕೆಲ ತಾರೆಯರು ಸಾಕ್ಷಿಯಾಗಿದ್ದರು. ಹೊಸ ಜೀವನಕ್ಕೆ ನಾಂದಿ ಹಾಡಿರುವ ವಿಕ್ಕಿ […]

Advertisement

Wordpress Social Share Plugin powered by Ultimatelysocial