2 ರಿಂದ 18 ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಡಿಸಿಜಿಐ ಗ್ರೀನ್ ಸಿಗ್ನಲ್

ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. 2 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವುದಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಇಂದು ಅನುಮತಿ ನೀಡಿದೆ. ಕುರಿತಂತೆ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಕ್ಕಳಿಗೂ ಕೊರೊನಾ ಲಸಿಕೆ ನೀಡಲು ತುರ್ತು ಅನುಮತಿ ನೀಡಿದೆ.2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೋವ್ಯಾಕ್ಸಿನ್ ಬಳಸಲು ಡಿಸಿಜಿಐ ಅನುಮತಿಸಿದ್ದು, 20 ದಿನಗಳ ಅಂತರದಲ್ಲಿ ಎರಡನೆ ಡೋಸ್ ನೀಡುವ ಸೂಚನೆ ನೀಡಿದೆ. 18 ವರ್ಷ ಮೇಲ್ಮಟ್ಟವರಿಗೆ ಈಗಾಗಲೇ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಮಕ್ಕಳಿಗೆ ಕೊರೊನಾ ಲಸಿಕೆ ವಿತರಿಸಲು ಅನುಮತಿ ದೊರೆತಿರಲಿಲ್ಲ. ಈಗ ಮಕ್ಕಳಿಗೂ ಲಸಿಕೆ ನೀಡಲು ಅನುಮತಿ ದೊರೆತಿದ್ದು, ಸದ್ಯ ತುರ್ತು ಬಳಕೆಗೆ ಡಿಸಿಜಿಐ ಸಮ್ಮತಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಈ ಸರ್ಕಾರ ಸತ್ತವರಿಗೇ ಪರಿಹಾರ ನೀಡಿಲ್ಲ;ರೈತರ ಬಗ್ಗೆ ಕಾಳಜಿಯಂತೂ ಮೊದಲೇ ಇಲ್ಲ ಡಿಕೆಶಿ

Tue Oct 12 , 2021
ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ […]

Advertisement

Wordpress Social Share Plugin powered by Ultimatelysocial