ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು.

 

ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ.ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆಯಬೇಕಿದ್ದ ಕೊರೊನಾ ಸಂಬಂಧಿತ ಸಭೆ ರದ್ದಾಗಿದೆ.ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಇಂದು ವಿಧಾನಸೌಧದಲ್ಲಿ ನಡೆಯ ಬೇಕಿದ್ದ ಕೋವಿಡ್ ಸಭೆ ರದ್ದಾಗಿದೆ. ಸಭೆಯನ್ನು ಸೋಮವಾರ ನಡೆಸಲು ನಿರ್ಧರಿಸಲಾಗಿದೆ. ವಿಪತ್ತು ನಿರ್ವಹಣಾ ಬಹುತೇಕ ಅಧಿಕಾರಿಗಳು ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದಲ್ಲಿದ್ದಾರೆ ಹಾಗಾಗಿ ಇಂದಿನ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ.

Sat Dec 24 , 2022
ಧಾರವಾಡಕ್ಕೆ ಯುವಜನ ಮಹೋತ್ಸವಕ್ಕೆ ಪ್ರಧಾನಿಗಳು ಬರ್ತಿದ್ದಾರೆ. ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಮಹದಾಯಿ ಬಗ್ಗೆ ಮಾತಾಡಲು ಕಾಂಗ್ರೆಸ್‌ನರಿಗೆ ನೈತಿಕತೆ ಇಲ್ಲಾ. ಕುಡಿಯುವ ನೀರಿಗಾಗಿ ಮನಮೋಹನ್ ಸಿಂಗ್‌ಗೆ ಪರಿಪರಿಯಾಗಿ ಬೇಡಿಕೊಂಡೆವು. ಯೋಜನೆ ಜಾರಿಗೆ ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ಸಜ್ಜಾಗಿದ್ದೇವೆ. ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ, ಕೊನೆಯಲ್ಲಿ ನಾವು ಮಾಡಿದ್ದು ಅನ್ನುವುದು ಕಾಂಗ್ರೆಸ್ ಅಭ್ಯಾಸ. ಕೊವಿಡ್ ಹೆಸರಲ್ಲಿ ಕಾಂಗ್ರೆಸ್ ಪಾದಯಾತ್ರೆ ತಡೆಯುತ್ತಿದ್ದಾರೆ ಅನ್ನೋ ಆರೋಪ ಹಿನ್ನೆಲೆ, ಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ […]

Advertisement

Wordpress Social Share Plugin powered by Ultimatelysocial