ಕೊರೊನಾ ಸೋಂಕು ಪತ್ತೆಯಾಗಿದೆ.

ವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಭೀತಿ ನಡುವೆಯೇ ಕಳೆದ 24 ಗಂಟೆಯಲ್ಲಿ 170 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.24 ಗಂಟೆಯಲ್ಲಿ ಕೋವಿಡ್ ಮಹಾಮಾರಿಗೆ ಓರ್ವರು ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ 5,30721 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,371 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,47,002 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 10,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,14,06,483 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 85,282 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ.

Mon Jan 9 , 2023
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಜನವರಿ […]

Advertisement

Wordpress Social Share Plugin powered by Ultimatelysocial