ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣಗಳು ಪತ್ತೆ,

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆಯಾಗಿದೆ. ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 172 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,266ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,722ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,319ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 172 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,47,174ಕ್ಕೆ ತಲುಪಿದೆ. ಉತ್ತರಾಖಂಡದಲ್ಲೂ ಕೊರೋನಾ ಹೊಸ ರೂಪಾಂತರಿ XBB 1.5 ಪತ್ತೆಇನ್ನು ಭಾರತದಲ್ಲಿ ಒಂದೇ 1,69,568 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 91.23 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,14,63,312 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್.

Tue Jan 10 , 2023
ಬೆಂಗಳೂರು, ಜನೆವರಿ 10: ಇದೇ ವರ್ಷದ ಜೂನ್ ವೇಳೆಗೆ ಬೆಂಗಳೂರು ನಗರದಲ್ಲಿ ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ಸಂಚರಿಸಲಿದೆ.BMTC ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಎ.ಸೂರ್ಯಸೇನ್‌ ಈ ವಿಚಾರವಾಗಿ ಮಾಹಿತಿ ನೀಡಿದರು.’ನಗರ ಭೂ ಸಾರಿಗೆ ಇಲಾಖೆ (DULT) ನಿಧಿಯ ಅಡಿಯಲ್ಲಿ ಐದು ಡಬಲ್ ಡೆಕ್ಕರ್ AC ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್ ಅನ್ನು ಆಹ್ವಾನಿಸಿದ್ದೇವೆ.ನಾವು ರಾಷ್ಟ್ರೀಯ ಕ್ಲೀನ್ ಏರ್ ಪ್ರೋಗ್ರಾಂ (NCAP) ಅಡಿಯಲ್ಲಿ ಅಂತಹ ಇನ್ನೊಂದು ಐದು ಬಸ್‌ಗಳನ್ನು ಖರೀದಿಸುತ್ತಿದ್ದೇವೆ’ […]

Advertisement

Wordpress Social Share Plugin powered by Ultimatelysocial