COVID:ಕರ್ನಾಟಕದಲ್ಲಿ ಹತ್ತು ದಿನದಲ್ಲಿ 461 ಮಂದಿ ಕೊವಿಡ್​ಗೆ ಬಲಿ;

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ  ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.

ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ (Karnataka) ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

100ಸಾವಿನ ಪೈಕಿ 8 ಮಂದಿ ಮನೆಯಲ್ಲೇ ಸಾವಿಗೀಡಾಗುತ್ತಿದ್ದಾರೆ. ಈ ಸಾವಿನಲ್ಲಿ ಬಹುತೇಕ ಮಂದಿ ಹಿರಿಯ ವಯಸ್ಕರಾಗಿದ್ದರೆ. ಮನೆಯಲ್ಲೇ ಕೊರೊನಾಗೆ ಬಲಿಯಾಗುತ್ತಿರಲು ಕಾರಣ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಸಮಸ್ಯೆ ಇರುವವರು ಎಚ್ಚರ ವಹಿಸದೇ ಇರುವುದು ಮನೆಯಲ್ಲಿ ಮೃತಪಡುತ್ತಿದ್ದಾರೆ. ರೋಗ ಲಕ್ಷಣಗಳು ಇದ್ದರೂ ಕೊವಿಡ್ ಟೆಸ್ಟ್​ಗೆ ಮುಂದಾಗುತ್ತಿಲ್ಲ.

24 ಗಂಟೆಯಲ್ಲಿ 1,61,386 ಕೊವಿಡ್ ಕೇಸ್ ಪತ್ತೆ:
ದೇಶದಲ್ಲಿ 24 ಗಂಟೆಯಲ್ಲಿ 1,61,386 ಕೊವಿಡ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 1,733 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 2,81,109 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಭಾರತದಲ್ಲಿ 16,21,603 ಕೊವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರತಿನಿತ್ಯದ ಕೊವಿಡ್ ಪಾಸಿಟಿವಿಟಿ ದರ ಶೇ.9.26 ಇದೆ. 167.29 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.

ಮಕ್ಕಳಿಗೆ ಬರೆಯಿಟ್ಟ ಕೊರೊನಾ:
ಮಹಾಮಾರಿ ಕೊರೊನಾ ಬೆಂಗಳೂರು ಶಾಲಾ ಮಕ್ಕಳ ಶಿಕ್ಷಣಕ್ಕೆ ಬರೆಯಿಟ್ಟಿದೆ. ಕೊರೊನಾ ಕಾಟದಿಂದ ಶಾಲೆಗಳಲ್ಲಿ ಶಿಕ್ಷಣ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ಆದರೆ ಇಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ. ಶಿಕ್ಷಣ ಇಲಾಖೆಗೆ ಅರ್ಧಕ್ಕೆ ಶಾಲೆಬಿಟ್ಟ ಮಕ್ಕಳ ಪತ್ತೆ ಟೆನ್ಷನ್ ಶುರುವಾಗಿದೆ. ಶಾಲೆ ಬಿಟ್ಟವರ ಪೈಕಿ ಅರ್ಧಕ್ಕಿಂತ ಕಡಿಮೆ ಮಕ್ಕಳು ಮಾತ್ರ ಶಾಲೆಗೆ ವಾಪಸ್ ಆಗಿದ್ದಾರೆ. ಇನ್ನು ಉಳಿದವರನ್ನು ಮತ್ತೆ ಶಾಲೆಗೆ ಕರೆತರುವುದು ದೊಡ್ಡ ಸವಾಲಾಗಿದೆ. ಕೊರೊನಾ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆ ಮಕ್ಕಳ ಸುರಕ್ಷತೆಗಾಗಿ ಶಾಲೆಗಳನ್ನು ಬಂದ್ ಮಾಡಿಸಿತ್ತು. ಸದ್ಯ ಕೊರೊನಾ ಕಡಿಮೆಯಾದ ಹಿನ್ನೆಲೆ ಮತ್ತೆ ಶಾಲೆಗಳನ್ನು ತೆರೆಯಲಾಗಿದೆ. ಆದ್ರೆ ಮಕ್ಕಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಅನೇಕ ಮಕ್ಕಳು ಶಾಲೆಗಳ ಮೇಲೆ ಒಲವು ಕಳೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೂರ್ಯನ ಸ್ಫೋಟಗಳಿಂದ ಭೂಕಾಂತೀಯ ಚಂಡಮಾರುತ ಇಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ, NOAA ಎಚ್ಚರಿಕೆ ನೀಡುತ್ತದೆ

Wed Feb 2 , 2022
ರಾಷ್ಟ್ರೀಯ ಸಾಗರ ಮತ್ತು ವಾತಾವರಣದ ಆಡಳಿತದ (NOAA) ಬಾಹ್ಯಾಕಾಶ ಹವಾಮಾನ ಮುನ್ಸೂಚನೆ ಕೇಂದ್ರವು ಫೆಬ್ರವರಿ 2, ಬುಧವಾರ ಭೂಮಿಗೆ ಭೂಕಾಂತೀಯ ಚಂಡಮಾರುತವನ್ನು ಅಪ್ಪಳಿಸುವ ಎಚ್ಚರಿಕೆಯನ್ನು ನೀಡಿದೆ. Space.com ಪ್ರಕಾರ, ಶಕ್ತಿಯುತ ಸೌರ ಜ್ವಾಲೆಯು ಬಾಹ್ಯಾಕಾಶದ ಮೂಲಕ ಹಾದುಹೋಗುತ್ತಿದೆ ಮತ್ತು ಅದು ಬುಧವಾರ ಭೂಮಿಗೆ ಅಪ್ಪಳಿಸಲಿದೆ. ಯುರೋಪಿಯನ್ ಸ್ಪೇಸ್ ಏಜೆನ್ಸಿಯನ್ನು ಉಲ್ಲೇಖಿಸಿ, M1-ಕ್ಲಾಸ್ ಸೋಲಾರ್ ಫ್ಲೇರ್ ಎಜೆಕ್ಷನ್ (CMEs) ನಂತರ ಸೂರ್ಯನ ಮೇಲ್ಮೈ ಬಳಿ ಪ್ರಬಲವಾದ ಸ್ಫೋಟ ಸಂಭವಿಸುತ್ತದೆ ಎಂದು ಅದು […]

Advertisement

Wordpress Social Share Plugin powered by Ultimatelysocial