ಕೆಮ್ಮು, ಶೀತ, ಜ್ವರ ಇದ್ದರೆ ಕೋವಿಡ್ ಟೆಸ್ಟ್ ಕಡ್ಡಾಯ

 

 

ಚೀನಾ ಸೇರಿದಂತೆ ಇತರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ರಾಜ್ಯ ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ.ಕೆಮ್ಮು, ಶೀತ, ಜ್ವರ ಇತರೆ ಸಮಸ್ಯೆಯಿಂದ (ಐಎಲ್‌ಎ – ಸಾರಿ) ಬಳಲುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.ಪ್ರಸ್ತುತ ಕೇವಲ ಶೇಕಡ 20ರಷ್ಟು ಮಂದಿ ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದು, ಎಲ್ಲರೂ ಇದನ್ನು ಪಡೆಯಬೇಕು ಎಂದು ಮನವಿ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕವನ್ನು ಪರಿಶೀಲಿಸಿ ಬಳಕೆಗೆ ಸನ್ನದ್ದವಾಗಿಟ್ಟುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿರುವುದಾಗಿ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಡಿ. 30ಕ್ಕೆ ಮತ್ತೊಂದು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಚಾಲನೆ?

Fri Dec 23 , 2022
ನವದೆಹಲಿ, ಡಿಸೆಂಬರ್‌ 23: ದೇಶದ ಏಳನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದು ಈಶಾನ್ಯ ಭಾಗದ ಮೊದಲ ರೈಲಾಗಿರಲಿದೆ7ನೇ ವಂದೇ ಭಾರತ್‌ ರೈಲು ಪಶ್ಚಿಮ ಬಂಗಾಳದ ಹೌರಾದಿಂದ ನ್ಯೂ ಜಲ್ಪೈಗುರಿ ನಡುವೆ ಸಂಪರ್ಕ ಕಲ್ಪಿಸುತ್ತದೆ.ಹೌರಾದಿಂದ ನ್ಯೂ ಜಲ್ಪೈಗುರಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಲಿದ್ದು, ರಾಜ್ಯ ರಾಜಧಾನಿ ಕೋಲ್ಕತ್ತಾ ಮತ್ತು ಉತ್ತರ ಬಂಗಾಳದ ನಡುವಿನ ವೇಗದ ಸಂಪರ್ಕ ಸಾಧ್ಯವಾಗಲಿದೆ. […]

Advertisement

Wordpress Social Share Plugin powered by Ultimatelysocial