ಕರ್ನಾಟಕ ಮತ್ತೊಂದು ಸಾಧನೆ : ವ್ಯಾಕ್ಸಿನ್ ವಿತರಣೆಯಲ್ಲಿ ಮೊದಲ ಸ್ಥಾನ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕ ಮತ್ತೊಂದು ಸಾಧನೆ ಮಾಡಿದ್ದು, ಲಸಿಕಾಕರಣದಲ್ಲಿ ಕರ್ನಾಟಕ ದೊಡ್ಡ ರಾಜ್ಯಗಳ ಪೈಕಿ ಮೊದಲ ಸ್ಥಾನ ಪಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕ ದೊಡ್ಡ ರಾಜ್ಯಗಳ ಪೈಕಿ ಮೊದಲ ಸ್ಥಾನ ಪಡೆದಿದೆ. ಮೊದಲ ಡೋಸ್ 100%, ಎರಡನೇ ಡೋಸ್ 87% ಆಗಿದೆ. ಕರ್ನಾಟಕ ಲಸಿಕಾಕರಣ ವಿಚಾರದಲ್ಲಿ ಎಲ್ಲರಿಗೂ ಮಾದರಿ ಎಂದು ಹೇಳಿದರು.ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ ಸರ್ಕಾರದ ಅತ್ಯುತ್ತಮ ಕೊಡುಗೆಯಾಗಿದೆ. ಕೋಲಾರ ಮತ್ತು ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ತಾಯಿ ಮತ್ತು ಮಗುವಿನ ಆಸ್ಪತ್ರೆ ಇದಾಗಲಿದೆ. 80 ಕಿ.ಮೀ ಅಂತರದಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ಇಲ್ಲ. ಇದನ್ನು ಗಮನಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಆಸ್ಪತ್ರೆ ಮಾಡಬೇಕು ಎಂದು ಮನವಿ ಮಾಡಿದ್ದೆ ಎಂದರು.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಚಿವರಾದ ಬೈರತಿ ಬಸವರಾಜ ಅವರು 20 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸ್ಥಳದಲ್ಲೇ ಒಪ್ಪಿಗೆ ಕೊಟ್ಟಿದ್ದಾರೆ. ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆಯಲ್ಲಿ ಒಟ್ಟು 100 ಹಾಸಿಗೆಗಳು ಇರಲಿವೆ. ಈ ಪೈಕಿ 50 ಸಾಮಾನ್ಯ ಹಾಸಿಗೆಗಳಾದರೆ, ಉಳಿದ 50 ಹಾಸಿಗೆಗಳು ಐಸಿಯು, ವೆಂಟಿಲೇಟರ್ ಸೇರಿದಂತೆ ಆಧುನಿಕ ಸೌಲಭ್ಯ ಒಳಗೊಂಡಿರಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುರಸಭೆ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ .

Tue Feb 1 , 2022
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಅವರ ಭಾವಚಿತ್ರಕ್ಕೆ ಹೂಹಾರ ಹಾಕಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ದೇಶಿಸಿ ಮಾತನಾಡಿದ ಆನಂದ್ ಮಡಿವಾಳ ಅವರು 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ ಎಂದು.ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ […]

Advertisement

Wordpress Social Share Plugin powered by Ultimatelysocial