ಕೋವಿಡ್-19: ಭಾರತದಲ್ಲಿ 18,132 ಹೊಸ ಕೇಸ್ ಪತ್ತೆ, 193 ಮಂದಿ ಸಾವು…?

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 193 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,71,607ಕ್ಕೆ ತಲುಪಿದ್ದು, 4,50,782ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 21,563 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,93,478ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,83,212 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,25,95,693 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 95,19,84,373 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

Sat Oct 16 , 2021
ನವದೆಹಲಿ:ಹೀರೋ ಮೋಟಾರು ಸಂಸ್ಥೆಯು ತನ್ನ ಎಲ್ಲ ಮಾಡೆಲ್‌ ಗಳ ಅಪ್‌ ಡೇಟೆಡ್‌ ಎಡಿಷನ್‌ ಬಿಡುಗಡೆ ಮಾಡುತ್ತಿದ್ದು, ಇದೀಗ ಹೀರೋ ಎಕ್ಸ್‌ಟ್ರೀಂ 160ಆರ್‌ ಬೈಕಿನ ಸ್ಟೆಲ್ತ್‌ ಎಡಿಷನ್‌ ಅನ್ನು ಬಿಡುಗಡೆ ಮಾಡಿದೆ. ಕಡಿಮೆ ತೂಕದ ಮತ್ತು ಹೆಚ್ಚು ವೇಗದ ಬೈಕ್‌ ಎನ್ನುವ ಕೀರ್ತಿ ಪಡೆದಿರುವ ಎಕ್ಸ್‌ಟ್ರೀಂ 160ಆರ್‌ ಬೈಕ್‌ ನಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದ್ದು, ಮ್ಯಾಟ್‌ ರೂಪದಲ್ಲಿ ಬಿಡುಗಡೆ ಮಾಡಲಾಗಿದೆ. ಬೈಕ್‌ ನಲ್ಲಿ ಹೊಸದಾಗಿ ಯುಎಸ್‌ಬಿ ಚಾರ್ಜರ್‌ ಅಳವಡಿಸಲಾಗಿದ್ದು, ಎಲ್‌ ಸಿಡಿ ಡಿಸ್ ಪ್ಲೇ ನಲ್ಲಿ 5 ಬ್ರೈಟ್‌ ನೆಸ್‌ ಆಯ್ಕೆಯನ್ನೂ ನೀಡಲಾಗಿದೆ. […]

Advertisement

Wordpress Social Share Plugin powered by Ultimatelysocial