ಇದು ರಣಜಿಗೆ ಮಾಡಿದ ಅವಮಾನ.

 

 

 

 

ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆಯಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ ಪಡೆಯನ್ನು ಆಯ್ಕೆ ಮಾಡಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಈ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

ಈ ಮೂಲಕ ಸುದೀರ್ಘ ಕಾಲದಿಂದ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಪಡೆಯುವ ಸೂರ್ಯಕುಮಾರ್ ಯಾದವ್ ಕನಸು ನನಸಾಗಿದೆ. ಮತ್ತೊಂದೆಡೆ ರಿಷಭ್ ಪಂತ್ ವಿಶ್ರಾಂತಿಯಲ್ಲಿರುವ ಕಾರಣ ಇಶಾನ್ ಕಿಶನ್‌ಗೆ ಕೂಡ ತಂಡದಲ್ಲಿ ಸ್ಥಾನ ದೊರೆತಿದೆ.

ಈ ಸಂದರ್ಭದಲ್ಲಿ ಕೆಲ ಕ್ರಿಕೆಟ್ ಅಭಿಮಾನಿಗಳು ಈ ಆಯ್ಕೆಯ ವಿರುದ್ಧ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಪ್ರತಿಭಾನ್ವಿತ ಯುವ ಆಟಗಾರರನ್ನು ಕಡೆಗಣಿಸಿರುವ ವಿಚಾರವಾಗಿ ಅಭಿಮಾನಿಗಳು ಸಿಡಿಮಿಡಿಗೊಂಡಿದ್ದು ಅಂಥಾ ಆಟಗಾರರ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಈ ಮಾದರಿಗೆ ಆಯ್ಕೆ ಮಾಡಿರುವುದು ರಣಜಿ ಟ್ರೋಫಿಗೆ ಮಾಡಿರುವ ಅವಮಾನ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಪೃಥ್ವಿ ಶಾ, ಸರ್ಫರಾಜ್ ಅಬ್ಬರ

ಸದ್ಯ ದೇಶೀಯ ಕ್ರಿಕೆಟ್ ಮಾದರಿಯಲ್ಲಿ ಕಳೆದ ಹಲವು ವರ್ಷಗಳಿಂದ ಅದ್ಭುತ ಪ್ರದರ್ಶನದ ಮೂಲಕ ಅಬ್ಬರಿಸುತ್ತಿರುವ ಆಟಗಾರರೆಂದರೆ ಸರ್ಫರಾಜ್ ಖಾನ್ ಹಾಗೂ ಪೃಥ್ವಿ ಶಾ. ಎಲ್ಲಾ ಮಾದರಿಯಲ್ಲಿಯೂ ಈ ಆಟಗಾರರು ಮಿಂಚುಹರಿಸುತ್ತಿದ್ದು ರಣಜಿ ಟ್ರೋಫಿಯಲ್ಲಿ ರನ್ ಮಳೆ ಹರಿಸುತ್ತಿದ್ದಾರೆ. ಕಳೆದ ಎರಡ್ಮೂರು ಆವೃತ್ತಿಗಳಲ್ಲಿ ಈ ಇಬ್ಬರು ಆಟಗಾರರು ಕೂಡ ತಮ್ಮ ಅತ್ಯುನ್ನತ ಫಾರ್ಮ್ ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ದೊರೆಯಬೇಕು ಎಂಬ ಅಭಿಪ್ರಾಯಗಳು ಸಾಕಷ್ಟು ಸಮಯಗಳಿಂದ ಕೇಳಿ ಬರುತ್ತಿದೆ. ಈ ಮಧ್ಯೆ ನ್ಯೂಜಿಲೆಂಡ್ ವಿರುದ್ಧದ ಟಿ20 ತಂಡದಲ್ಲಿ ಯುವ ಆಟಗಾರ ಪೃಥ್ವಿ ಶಾ ಭಾರತ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬರೊಬ್ಬರಿ 537 ದಿನಗಳ ಬಳಿಕ ಯು ಆಟಗಾರ ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಪ್ರಕಟಿಸಿರುವ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಶಾನ್ ಕಿಶನ್‌ಗೆ ಕೂಡ ಈ ತಂಡದಲ್ಲಿ ಅವಕಾಶ ದೊರೆತಿದೆ.

ಅಭಿಮಾನಿಗಳ ಬೇಸರಕ್ಕೆ ಕಾರಣವಾದ ಸರ್ಫರಾಜ್ ನಿರ್ಲಕ್ಷ್ಯ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಪ್ರಕಟಿಸಿರುವ ತಂಡದಲ್ಲಿ ಮುಂಬೈನ ಸರ್ಫರಾಜ್‌ಗೆ ಅವಕಾಶ ದೊರೆಯದಿರುವ ಬಗ್ಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ಆವೃತ್ತಿಗಳಿಂದ ರಣಜಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಸರ್ಫರಾಜ್ ಈ ಬಾರಿಯ ರಣಜಿ ಆವೃತ್ತಿಯಲ್ಲಿ ಮುಂಬೈ ಪರವಾಗಿ ಆಡಿರುವ ಐದು ಪಂದ್ಯಗಳಲ್ಲಿ ಭರ್ಜರಿ 431 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ ಒಂದು ಅರ್ಧ ಶತಕ ಸೇರಿದೆ. ಕಳೆದ ಆವೃತ್ತಿಯಲ್ಲಿ ಆಡಿದ 6 ಪಂದ್ಯಗಳಲ್ಲಿ 982 ರನ್‌ಗಳನ್ನು ಬಾರಿಸಿ ಅಬ್ಬರಿಸಿದ್ದರು. 122.75ರ ಸರಾಸರಿಯಲ್ಲಿ ಅವರು ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ಸರ್ಫರಾಜ್ ಖಾನ್ ಅವರನ್ನು ನಿರ್ಲಕ್ಷ್ಯ ಮಾಡಿ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಆಯ್ಕೆ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಣಜಿಗೆ ಮಾಡಿದ ಅವಮಾನ

ಸರ್ಫರಾಜ್ ಅಹ್ಮದ್ ನಿರ್ಲಕ್ಷಯ ಮಾಡಿರುವ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ಕಾಮೆಂಟೇಟರ್ ಹರ್ಷ ಭೋಗ್ಲೆ “ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸರ್ಫರಾಜ್ ಖಾನ್‌ಗೆ ಇದು ಖಂಡಿತವಾಗಿಯೂ ಅರಗಿಸಿಕೊಳ್ಳಲು ಬಹಳ ಕಷ್ಟವಾಗಲಿದೆ. ಇದಕ್ಕಿಂತ ಹೆಚ್ಚಿನದ್ದನ್ನು ಮಾಡಿಲು ಅಸಾಧ್ಯ”ಎಂದಿದ್ದಾರೆ. ಇನ್ನೊಬ್ಬರು ಅಭಿಮಾನಿ “ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿಕೊಂಡಿರುವುದು ರಣಜಿ ಟ್ರೋಫಿಗೆ ಮಾಡಿರುವ ಅವಮಾನ. ರಣಜಿಯಲ್ಲಿ ಅಬ್ಬರಿಸುತ್ತಿರುವ ಆ ಯುವ ಆಟಗಾರ ತಂಡದಲ್ಲಿ ಸ್ಥಾನ ಪಡೆಯಲು ಅತ್ಯಂತ ಅರ್ಹ. ಆಯ್ಕೆ ಮಂಡಳಿಯಿಂದ ಮತ್ತೊಮ್ಮೆ ಆಘಾತಕಾರಿ ನಿರ್ಧಾರ” ಎಂದು ಸರ್ಫರಾಜ್ ಉದ್ದೇಶಿಸಿ ಮಾತನಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂವಿಧಾನ ಪೀಠಿಕೆ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

Sat Jan 14 , 2023
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತ ಸಂವಿಧಾನದ ಪೀಠಿಕೆಯ ಫಲಕ ಅಳವಡಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ನಮ್ಮ ಸಂವಿಧಾನಕ್ಕೆ ಪೀಠಿಕೆ ಆತ್ಮವಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ದೇಶದ ಪ್ರತಿ ಪ್ರಜೆ ಭಾರತದ ಸಂವಿಧಾನದ ಆಶಯಗಳನ್ನು ಅರಿಯುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ. ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆ […]

Advertisement

Wordpress Social Share Plugin powered by Ultimatelysocial