ಭಾರತ – ಪಾಕ್‌ ಕ್ರಿಕೆಟ್ ಫ್ಯಾನ್ಸ್‌ಗೆ ಸಿಹಿ ಸುದ್ದಿ.

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆಯಿಂದಾಗಿ, ದೀರ್ಘಕಾಲದವರೆಗೆ ಯಾವುದೇ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಎರಡೂ ತಂಡಗಳು ಐಸಿಸಿ ಟೂರ್ನಿಗಳು ಮತ್ತು ಏಷ್ಯಾ ಕಪ್‌ನಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ.

ಹೀಗಿರುವಾಗ ಈ ಎರಡು ತಂಡಗಳ ನಡುವಣ ಪ್ರತಿಯೊಂದು ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ವರ್ಷ ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ. ಇದಾದ ಬಳಿಕ ಈ ತಂಡಗಳ ನಡುವೆ ಎಲ್ಲಿ ಪಂದ್ಯ ನಡೆಯಲಿದೆ ಎಂಬುದಕ್ಕೆ ಸಂಬಂಧಿಸಿದ ದೊಡ್ಡ ಅಪ್‌ಡೇಟ್‌ ಹೊರಬಿದ್ದಿದೆ.

ಈ ದೇಶದಲ್ಲಿ ಉಭಯ ತಂಡಗಳ ನಡುವೆ ಟಿ20 ಪಂದ್ಯ :

2024 ರ ಟಿ 20 ವಿಶ್ವಕಪ್ ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲೂ ಭಾರತ -ಪಾಕಿಸ್ತಾನ ನಡುವಿನ ಪಂದ್ಯವನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ. ಭಾರತ – ಪಾಕಿಸ್ತಾನ ನಡುವಿನ ಪಂದ್ಯ ವೆಸ್ಟ್ ಇಂಡೀಸ್‌ನಲ್ಲಿ ನಡೆಯುವುದಿಲ್ಲ ಬದಲಾಗಿ ಅಮೆರಿಕದಲ್ಲಿ ನಡೆಯಲಿದೆ ಎಂದು ಅಮೆರಿಕ ಕ್ರಿಕೆಟ್ ಮಂಡಳಿ ಅಧ್ಯಕ್ಷ ಅತುಲ್ ರೈ ಹೇಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಉಭಯ ತಂಡಗಳ ನಡುವಿನ ಕೊನೆಯ ಪಂದ್ಯ ನಡೆದಿತ್ತು.

ಭಾರತ – ನ್ಯೂಜಿಲೆಂಡ್ ಎರಡನೇ ಏಕದಿನ ಪಂದ್ಯ ರದ್ದು.!? ಕ್ರಿಕೆಟ್‌ ಫ್ಯಾನ್ಸ್ ಆತಂಕಕ್ಕೆ ಇದೇ ಕಾರಣ

ಅಮೆರಿಕನ್ ಕ್ರಿಕೆಟ್ ಮಂಡಳಿ ಮಾಹಿತಿ :

ಮಾಧ್ಯಮ ವರದಿಗಳ ಪ್ರಕಾರ, ಅಮೆರಿಕದ ಕ್ರಿಕೆಟ್ ಮಂಡಳಿ ಅಧ್ಯಕ್ಷ ಅತುಲ್ ರೈ ಸಂದರ್ಶನವೊಂದರಲ್ಲಿ, ‘ಫ್ಲೋರಿಡಾದಲ್ಲಿ ನಡೆದ ಭಾರತ – ವೆಸ್ಟ್ ಇಂಡೀಸ್ ಪಂದ್ಯಕ್ಕೆ ಸ್ಥಳೀಯ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಪಂದ್ಯದ ಎಲ್ಲಾ ಟಿಕೆಟ್‌ಗಳೂ ಮಾರಾಟವಾಗಿವೆ. ಹಾಗಾಗಿಯೇ ಭಾರತ – ಪಾಕಿಸ್ತಾನ ವಿಶ್ವಕಪ್ ಪಂದ್ಯವೂ ಇಲ್ಲೇ ನಡೆದರೆ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಗುತ್ತದೆ ಎಂಬುದು ನಮ್ಮ ಭಾವನೆ. ಕಳೆದ ವರ್ಷ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಲ್ಲಿ T20 ಸರಣಿಯ ಕೊನೆಯ ಪಂದ್ಯವನ್ನು ಫ್ಲೋರಿಡಾದಲ್ಲಿ ಆಡಲಾಯಿತು.

ಏಷ್ಯಾ ಕಪ್ 2023 ಕೂಡ ಭಾರತ – ಪಾಕ್‌ ಮುಖಾಮುಖಿ :

ಏಷ್ಯಾ ಕಪ್ 2023 ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಏಷ್ಯಾ ಕಪ್ 2023 ರಲ್ಲಿ ಆರು ತಂಡಗಳು ಇರಲಿದ್ದು, ಇದರಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಅರ್ಹತಾ ತಂಡಕ್ಕೆ ಅವಕಾಶ ಸಿಗುತ್ತದೆ. ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಒಂದೇ ಗುಂಪಿನಲ್ಲಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಅರ್ಹತಾ ತಂಡವನ್ನು ಸಹ ಸೇರಿಸಲಾಗುತ್ತದೆ. ಇದಾದ ಬಳಿಕ 2023ರ ಏಕದಿನ ವಿಶ್ವಕಪ್ ಭಾರತದಲ್ಲಿ ಮಾತ್ರ ನಡೆಯಲಿದೆ. ಈ ಟೂರ್ನಿಯಲ್ಲೂ ಉಭಯ ತಂಡಗಳ ನಡುವೆ ಕನಿಷ್ಠ ಒಂದು ಪಂದ್ಯ ನಡೆಯಲಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ನಗರದಿಂದ ಮೂರು ಮಾರ್ಗದಲ್ಲಿ ರೈಲು ಸಂಚಾರ.

Fri Jan 20 , 2023
ಬೆಂಗಳೂರು, ಜನವರಿ 20; ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಮೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ. ಈಗಾಗಲೇ ಮೈಸೂರು-ಚೆನ್ನೈ ನಡುವಿನ ರೈಲು ಬೆಂಗಳೂರು ಮೂಲಕ ಸಂಚಾರ ನಡೆಸುತ್ತಿದೆ. ಮೈಸೂರುಮತ್ತು ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್‌ನಲ್ಲಿ ಚಾಲನೆ ನೀಡಿದ್ದರು. ಈ ರೈಲು ಬೆಂಗಳೂರಿನ ಮೂಲಕ ಸಂಚಾರ ನಡೆಸುತ್ತದೆಯೇ ವಿನಃ ಬೆಂಗಳೂರಿನಿಂದ ಹೊರಡುವುದಿಲ್ಲ. […]

Advertisement

Wordpress Social Share Plugin powered by Ultimatelysocial