ಇಂದು ವಿರಾಟ್ ಕೊಹ್ಲಿ ಯಾರೂ ಮಾಡದ ಈ ದೊಡ್ಡ ದಾಖಲೆ ಮಾಡಲಿದ್ದಾರೆ.

ವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ಮಧ್ಯಾಹ್ನ 1:30ರಿಂದ ರಾಯ್‌ಪುರದಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಟೀಂ ಇಂಡಿಯಾ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಈ ಪಂದ್ಯದಲ್ಲಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಅಮೋಘ ದಾಖಲೆ ಬರೆಯುವ ಸಾಧ್ಯತೆ ಇದೆ.

ಇಲ್ಲಿಯವರೆಗೂ ಈ ಶ್ರೇಷ್ಠ ದಾಖಲೆಯನ್ನು ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಸಹ ಮಾಡಿಲ್ಲ.

ದಾಖಲೆ ನಿರ್ಮಿಸುತ್ತಾರಾ ಕಿಂಗ್ ಕೊಹ್ಲಿ?

ಇಂದು ನ್ಯೂಜಿಲೆಂಡ್ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ರನ್ ಗಳಿಸಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,000 ರನ್ ಪೂರೈಸಿದ ವಿಶ್ವದ ಮೊದಲ ಸಕ್ರಿಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಇಲ್ಲಿಯವರೆಗೆ ಈ ಶ್ರೇಷ್ಠ ದಾಖಲೆಯನ್ನು ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಮಾಡಲು ಸಾಧ್ಯವಾಗಿಲ್ಲ.

ʼಪಂತ್‌ ಇಸ್‌ ಬ್ಯಾಕ್‌…ʼ ಸಹಜ ಸ್ಥಿತಿಗೆ ಮರಳಲಿದ್ದಾರೆ ಕ್ರಿಕೆಟಿಗ ರಿಷಬ್..!

ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್ ನಂತರ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,889 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 34,357 ರನ್ ಗಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರು

1. ಸಚಿನ್ ತೆಂಡೂಲ್ಕರ್ (ಭಾರತ) – 34,357 ರನ್

2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 28,016 ರನ್

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 27,483 ರನ್

4. ಮಹೇಲಾ ಜಯವರ್ಧನೆ (ಶ್ರೀಲಂಕಾ) – 25,957 ರನ್

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) – 25,534 ರನ್

6. ವಿರಾಟ್ ಕೊಹ್ಲಿ (ಭಾರತ) – 24,889 ರನ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು

1. ಸಚಿನ್ ತೆಂಡೂಲ್ಕರ್ (ಭಾರತ) – 100 ಶತಕಗಳು

2. ವಿರಾಟ್ ಕೊಹ್ಲಿ (ಭಾರತ) – 74 ಶತಕಗಳು

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 71 ಶತಕಗಳು

4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 63 ಶತಕಗಳು

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) – 62 ಶತಕಗಳು

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕೇಂದ್ರ ಸರ್ಕಾರ'ದಿಂದ ಕೋಟ್ಯಾಂತರ ಕಾರ್ಮಿಕರಿಗೆ ಸಿಹಿ ಸುದ್ದಿ.

Sat Jan 21 , 2023
  ನವದೆಹಲಿ : ಕೇಂದ್ರ ಸರ್ಕಾರವು 2021-2022ರ ಕೇಂದ್ರ ಬಜೆಟ್ನಲ್ಲಿ ಸಾರ್ವಜನಿಕರಿಗೆ ಅನೇಕ ಭರವಸೆಗಳನ್ನ ನೀಡಿತ್ತು, ಅದ್ರಲ್ಲಿ ಹಲವು ಈಡೇರಿಸಿದೆ. ಅದ್ರಂತೆ, ಬಜೆಟ್ನಲ್ಲಿ ಮೋದಿ ಸರ್ಕಾರವು ಅಸಂಘಟಿತ ವಲಯದ ಕೋಟ್ಯಂತರ ಜನರಿಗೆ ಇ-ಕಾರ್ಮಿಕಕ್ಕಾಗಿ ಪೋರ್ಟಲ್ ತರುವುದಾಗಿ ಭರವಸೆ ನೀಡಿತ್ತು. ಇದನ್ನ ಸರ್ಕಾರವು ಆಗಸ್ಟ್ 2022ರಲ್ಲಿಯೇ ಪೂರ್ಣಗೊಳಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಇಂತಹ ಹಲವು ಭರವಸೆಗಳನ್ನ ನೀಡಿದ್ದರು, ಅದರ ಮೇಲೆ ಸರ್ಕಾರ ಈಗ ತನ್ನ ಪ್ರಗತಿಯನ್ನ […]

Advertisement

Wordpress Social Share Plugin powered by Ultimatelysocial