ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್.

ಬೆಂಗಳೂರು, ಜನೆವರಿ 10: ಇದೇ ವರ್ಷದ ಜೂನ್ ವೇಳೆಗೆ ಬೆಂಗಳೂರು ನಗರದಲ್ಲಿ ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ಸಂಚರಿಸಲಿದೆ.BMTC ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಎ.ಸೂರ್ಯಸೇನ್‌ ಈ ವಿಚಾರವಾಗಿ ಮಾಹಿತಿ ನೀಡಿದರು.’ನಗರ ಭೂ ಸಾರಿಗೆ ಇಲಾಖೆ (DULT) ನಿಧಿಯ ಅಡಿಯಲ್ಲಿ ಐದು ಡಬಲ್ ಡೆಕ್ಕರ್ AC ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್ ಅನ್ನು ಆಹ್ವಾನಿಸಿದ್ದೇವೆ.ನಾವು ರಾಷ್ಟ್ರೀಯ ಕ್ಲೀನ್ ಏರ್ ಪ್ರೋಗ್ರಾಂ (NCAP) ಅಡಿಯಲ್ಲಿ ಅಂತಹ ಇನ್ನೊಂದು ಐದು ಬಸ್‌ಗಳನ್ನು ಖರೀದಿಸುತ್ತಿದ್ದೇವೆ’ ಎಂದು ಸೂರ್ಯಸೇನ್‌ ತಿಳಿಸಿದ್ದಾರೆ. ಈ ಕುರಿತು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.ಈ ವಿಚಾರವಾಗಿ ಜನವರಿ 17 ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದು ಸೂರ್ಯಸೇನ್‌ ಹೇಳಿದರು.’ಈ ಪೂರ್ವಭಾವಿ ಸಭೆಯ ನಂತರ ಸ್ಪಷ್ಟ ಚಿತ್ರಣ ಹೊರಬರಲಿದೆ. ನಾವು ಫೆಬ್ರವರಿ 15 ರೊಳಗೆ ಟೆಂಡರ್ ಅನ್ನು ಅಂತಿಮಗೊಳಿಸಲು ಯೋಜಿಸುತ್ತಿದ್ದೇವೆ. ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ಅನ್ನು ಏಪ್ರಿಲ್ ಮತ್ತು ಜೂನ್ ನಡುವೆ ಪರಿಚಯಿಸಲಾಗುವುದು’ ಎಂದು ಅಧಿಕಾರಿ ತಿಳಿಸಿದರು.ಬಸ್‌ಗಳ ಉದ್ದವು 9,500 ಎಂಎಂ ಮತ್ತು 11,000 ಎಂಎಂ ನಡುವೆ ಇರುತ್ತದೆ.ಡಬ್ಬಲ್ ಡೆಕ್ಕರ್ ಡೀಸೆಲ್ ಬಸ್‌ಗಳು 1970-80ರ ದಶಕದಲ್ಲಿ ನಗರದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದ್ದವು. 1997ರ ವೇಳೆಗೆ ಅವುಗಳನ್ನು ಹಂತಹಂತವಾಗಿ ಸ್ಥಗಿತಗೊಳಿಸಲಾಯಿತು.ಮೊದಲ ಡಬಲ್ ಡೆಕ್ಕರ್ ಇ-ಬಸ್ ಹೊರ ವರ್ತುಲ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಈ ಬಸ್‌ಗಳು ಸುಮಾರು 70 ಪ್ರಯಾಣಿಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಶೋಕ್ ಲೇಲ್ಯಾಂಡ್-ಬೆಂಬಲಿತ ಸ್ವಿಚ್ ಮೊಬಿಲಿಟಿ, ಕಾಸಿಸ್ ಇ-ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್ ಮತ್ತು ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ – ಈ ಮೂರು ಸಂಸ್ಥೆಗಳು ಯೋಜನೆಯಲ್ಲಿ ಆಸಕ್ತಿಯನ್ನು ವ್ಯಕ್ತಪಡಿಸಿವೆ.ಚಾರ್ಜಿಂಗ್ ಸ್ಟೇಷನ್ BMTC ಹೊಸಕೋಟೆಯ ತನ್ನ ಬಸ್ ನಿಲ್ದಾಣದಲ್ಲಿ ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲು ಟೆಂಡರ್ ಅನ್ನು ಕರೆದಿದೆ. ಅಲ್ಲಿಂದ ದೂರದ ಮಾರ್ಗಗಳಲ್ಲಿ ಇ-ಬಸ್‌ಗಳನ್ನು ಓಡಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಬೈನಲ್ಲಿ ಮೊದಲ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್‌ ಭಾರತದ ಮೊದಲ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್ ಬಸ್‌ ಅನ್ನು ಮುಂಬೈನಲ್ಲಿ ಆರಂಭಿಸಲಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದಕ್ಷಿಣ ಮುಂಬೈನ YB ಸೆಂಟರ್‌ನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಅನ್ನು ಪ್ರಾರಂಭಿಸಿದರು. ಬಸ್‌ನ ಹೆಸರು ‘ಸ್ವಿಚ್ ಇಐವಿ 22’, ಡಬಲ್ ಡೆಕ್ಕರ್ ಬಸ್ ಅನ್ನು ಮುಂಬೈ ನಾಗರಿಕ ಸಾರಿಗೆ ಸಂಸ್ಥೆ ಸೆಪ್ಟೆಂಬರ್‌ನಿಂದ ಓಡಿಸಲು ಆರಂಭಿಸಿದೆ. 35 ರಷ್ಟು ಮಾಲಿನ್ಯವು ಡೀಸೆಲ್ ಮತ್ತು ಪೆಟ್ರೋಲ್‌ನಿಂದ ಆಗಿದ್ದು, ಈ ಬಸ್‌ಗಳ ಅಳವಡಿಕೆಯಿಂದ ಮಾಲಿನ್ಯ ಕಡಿಮೆಯಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದ ಮೊದಲ ಹವಾನಿಯಂತ್ರಿತ ಡಬಲ್ ಡೆಕ್ಕರ್ ಬಸ್ ಸೇರಿದಂತೆ ಎರಡು ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್‌ಪೋರ್ಟ್ (ಬೆಸ್ಟ್) ಇಲಾಖೆ ಅಡಿ ಬರಲಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನಾರ್ದನ ರೆಡ್ಡಿ ಬೆಂಬಲಿಸಿ ಬಿಜೆಪಿ ಮುಖಂಡರಿಂದ ರಾಜೀನಾಮೆ ಪರ್ವ

Tue Jan 10 , 2023
ಗಾಲಿ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧೆ ಮಾಡಲು ನಿರ್ಧರಿಸಿದಾಗಿನಿಂದ ಗಂಗಾವತಿ ಸೇರಿ ವಿವಿಧ ನಗರಗಳ ಬಿಜೆಪಿ ಮುಖಂಡರು ಗಾಲಿ ಜನಾರ್ದನರೆಡ್ಡಿಯನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ.ಗಂಗಾವತಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಸರಕಾರದ ವಿವಿಧ ಹುದ್ದೆಗೆ ನಾಮನಿರ್ದೇಶನಗೊಂಡಿದ್ದ ಕೆಲವರು ಸೇರಿ ಹತ್ತಕ್ಕೂ ಹೆಚ್ಚು ಬಿಜೆಪಿ ಪ್ರಮುಖರು ಮಂಗಳವಾರ ಗಾಲಿ ಜನಾರ್ದನರೆಡ್ಡಿ […]

Advertisement

Wordpress Social Share Plugin powered by Ultimatelysocial