30ವರ್ಷ ಶಿಕ್ಷಕ ವೃತ್ತಿ.60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;

ತಿರುವನಂತಪುರಂ: 30 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ನಿವೃತ್ತ ಶಿಕ್ಷಕನೊಬ್ಬನನ್ನು ಬಂಧಿಸಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿ ತಿಳಿಸಿದೆ.

ಮಲಪ್ಪುರಂನ ಸೈಂಟ್ ಜೆಮ್ಮಾಸ್ ಹುಡುಗಿಯರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ, ಮಲಪ್ಪುರಂ ಪುರಸಭೆ ಸದಸ್ಯ ಕೆವಿ ಶಶಿಕುಮಾರ್ ನನ್ನು ಪೊಲೀಸರು ಶುಕ್ರವಾರ ಬಂಧಿಸಿರುವುದಾಗಿ ವರದಿ ವಿವರಿಸಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹಾಗೂ ಶಾಲಾ ಆಡಳಿತ ಮಂಡಲಿಯ ವೈಫಲ್ಯದ ಕುರಿತು ಶೀಘ್ರವೇ ವರದಿ ನೀಡುವಂತೆ ಕೇರಳ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ(ಐಎಎಸ್) ಬಾಬು ಕೆ ಅವರಿಗೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.

ಮಪಲ್ಲುರಂನ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಶಿಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದು, ಒಂದು ವಾರದ ನಂತರ ಶಿಕ್ಷಕ ಶಶಿಕುಮಾರ್ ನನ್ನು ಪೊಲೀಸರು ಬಂಧಿಸಿದ್ದರು.

ಶಶಿಕುಮಾರ್ ಶಿಕ್ಷಕನಾಗಿದ್ದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದಾರೆ. ಕೆವಿ ಶಶಿಕುಮಾರ್ ಸಿಪಿಎಂ ಮುಖಂಡನಾಗಿದ್ದು, ಮಲಪ್ಪುರಂ ಪುರಸಭೆಗೆ ಮೂರು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದ.

ಶಶಿಕುಮಾರ್ 2022ರ ಮಾರ್ಚ್ ನಲ್ಲಿ ಸೈಂಟ್ ಜೆಮ್ಮಾಸ್ ಹುಡುಗಿಯರ ಹೈಸ್ಕೂಲ್ ನಿಂದ ನಿವೃತ್ತಿಯಾಗಿದ್ದ. ತಾನು ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾಗಿರುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ ನಂತರ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘ ಈ ಆರೋಪ ಮಾಡಿರುವುದಾಗಿ ವರದಿ ವಿವರಿಸಿದೆ.

ಪೊಲೀಸ್ ಠಾಣೆಯಲ್ಲಿ ಹಲವಾರು ದೂರು ದಾಖಲಾದ ನಂತರ ಶಶಿಕುಮಾರ್ ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ. ಹಳೆ ವಿದ್ಯಾರ್ಥಿಗಳ ಸಂಘದ ಪ್ರಕಾರ, 2019ರಲ್ಲಿಯೇ ಶಶಿಕುಮಾರ್ ವಿರುದ್ಧ ಕೆಲವು ವಿದ್ಯಾರ್ಥಿನಿಯರು ದೂರು ನೀಡಿದ್ದರು ಕೂಡಾ ಶಾಲಾ ಆಡಳಿತ ಮಂಡಳಿ ಯಾವ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು.

ನಂತರ ಹಳೆ ವಿದ್ಯಾರ್ಥಿಗಳ ಸಂಘದ ಮೂಲಕ ಲೈಂಗಿಕ ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯರು ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಿಪಿಎಂ(ಎಂ) ಶಶಿಕುಮಾರ್ ನನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ವರದಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕರು ನಿಜವಾದ ಸಂಶೋಧಕರು ; ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ!

Sat May 14 , 2022
ಆದಿಚುಂಚನಗಿರಿ, ಮೇ 14- ಆಧುನಿಕ ಯುಗದಲ್ಲಿ ಶಿಕ್ಷಕರು ನಿಜವಾದ ಸಂಶೋಧಕರು, ಮುಗ್ಧ ಮನಸ್ಸಿನ ಮಕ್ಕಳ ಮನೋಧರ್ಮವನ್ನು ಅರಿತು ಶ್ರೇಷ್ಠ ಬೋಧನೆಯಿಂದ ಪ್ರಭುದ್ಧರನ್ನಾಗಿಸಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಕರೆ ನೀಡಿದರು. ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಡೆದ ಅಧ್ಯಾಪಕರ ವೃತ್ತಿಪರ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಪವಿತ್ರವಾದ ಶಿಕ್ಷಕ ವೃತ್ತಿಯನ್ನು ಅನುಭವಿಸುತ್ತಿರುವ ನೀವು ಹೊಸ ಹೊಸ ತಂತ್ರಜ್ಞಾನ […]

Advertisement

Wordpress Social Share Plugin powered by Ultimatelysocial