ಗಣರಾಜ್ಯೋತ್ಸವ ದಿನದಂದು ಕರೆಂಟ್ ಶಾಕ್;

ಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲು ಮುಂದಾದ ವ್ಯಕ್ತಿಯೊಬ್ಬರಿಗೆ ಹೈ ವೋಲ್ಟೇಜ್ ಕರೆಂಟ್ ತಗುಲಿದ ಪರಿಣಾಮ ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಸೀತಾಮಾರಿ ಜಿಲ್ಲೆ ರಾಮ್ ನಗರದಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ನಡೆಸುವ ಅಭಿಷೇಕ್ ಜಾ ಮೃತಪಟ್ಟ ವ್ಯಕ್ತಿಯಾಗಿದ್ದು, ಪ್ರತಿವರ್ಷದಂತೆ ಈ ವರ್ಷವೂ ಅವರು ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಲು ಮುಂದಾಗಿದ್ದರು.

ಈ ವೇಳೆ ರಾಷ್ಟ್ರಧ್ವಜ ಕಟ್ಟಿದ್ದ ಕಬ್ಬಿಣದ ಪೈಪ್‍ಗೆ 11 ಸಾವಿರ ವೋಲ್ಟ್ ವಿದ್ಯುತ್ ಪ್ರವಹಿಸುತ್ತಿದ್ದ ವಯರ್ ಸಂಪರ್ಕಕ್ಕೆ ಬಂದಿದ್ದು ಇದರಿಂದ ಅವರಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಇವರನ್ನು ರಕ್ಷಿಸಲು ಹೋದ ನಾಲ್ವರು ಸಹ ಕರೆಂಟ್ ಶಾಕ್ ಗೆ ಒಳಗಾಗಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸದ್ಯದಲ್ಲೇ ಬರಲಿದೆ "ದೊಡ್ಡಹಟ್ಟಿ ಬೋರೇಗೌಡ" ಚಿತ್ರದ ಹಾಡು.

Fri Jan 27 , 2023
ಗ್ರಾಮೀಣ ಸೊಗಡಿನ ಕಥಾಹಂದರ ಹೊಂದಿರುವ “ದೊಡ್ಡಹಟ್ಟಿ ಬೋರೇಗೌಡ” ಚಿತ್ರ ಟ್ರೇಲರ್ ಮೂಲಕ ಜನಮನ ಗೆದ್ದಿದೆ. 2021 ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಅತ್ತ್ಯುತ್ತಮ ಚಿತ್ರ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಬಿಡುಗಡೆಗೂ ಪೂರ್ವದಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಹಾಡೊಂದು ಜನವರಿ 30 ರ ಸೋಮವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಹರ್ಷವರ್ಧನ್ ರಾಜ್ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಮೆಹಬೂಬ್ ಸಾಬ್ ಹಾಡಿದ್ದಾರೆ.ರಾಜರಾಜೇಶ್ವರಿ ಕಂಬೈನ್ಸ್ ಲಾಂಛನದಲ್ಲಿ ಬಿ.ಸಿ.ಶಶಿಕುಮಾರ್ ಹಾಗೂ […]

Advertisement

Wordpress Social Share Plugin powered by Ultimatelysocial