ರಾಜ್ಯದ ಜನತೆಗೆ `ಕರೆಂಟ್ ಶಾಕ್’ :

ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್, ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲಯತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ಎಸ್ಕಾಮ್ ಗಳು ಪ್ರತಿ ಯುನಿಟ್ ಗೆ 1.50 ರಿಂದ 2 ರೂ. ತನಕ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜಿಕ ಆದಾಲಯತ್ ನಡೆಸಲಿದ್ದು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ.

ಇನ್ನು ಕಳೆದ ವರ್ಷ ರಾಜ್ಯದಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಕಳೆದ ಏಪ್ರಿಲ್ ನಲ್ಲಿ ಪ್ರತಿ ಯುನಿಟ್ ಗೆ 35 ಪೈಸೆ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಸೆಪ್ಟೆಂಬರ್ ನಲ್ಲಿ ಇಂಧನ ಹೊಂದಾಣಿಕೆ ಹಿನ್ನ್‌ಎಲೆಯಲ್ಲಿ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 24 ಪೈಸೆಯಿಂದ 43 ಪೈಸೆ ವರೆಗೆ ಏರಿಕೆ ಮಾಡಲಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅದಾನಿ ಪರ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್.

Tue Feb 7 , 2023
ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ ಬೆಳವಣಿಗೆ ಕಾರಣಕ್ಕೆ ಗೌತಮ್ ಅದಾನಿ ಸಂಪತ್ತಿನಲ್ಲಿ ತೀವ್ರ ಇಳಿಕೆ ಕಂಡುಬಂದಿದೆ.ಹೀಗಾಗಿ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಹಾಗೂ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ, ಈಗ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದಲೂ ಹೊರ ಬಿದ್ದಿದ್ದಾರೆ.ಇದರ ಮಧ್ಯೆ […]

Advertisement

Wordpress Social Share Plugin powered by Ultimatelysocial