ಸದ್ಯ ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಾಂತಾರ ಸಿನಿಮಾದ ಬಳಿಕ ನಟ ರಿಷಬ್ ಶೆಟ್ಟಿ ದೇಶ, ವಿದೇಶದಲ್ಲೂ ಖ್ಯಾತಿ ಘಳಿಸಿದ್ದಾರೆ. ಸದ್ಯ ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ತುಳುನಾಡಿನ ಸಂಸ್ಕೃತಿಯಲ್ಲಿ ಮೂಡಿ ಬಂದಿದ್ದ ಕಾಂತಾರ ಸಿನಿಮಾದ ಸಕ್ಸಸ್ ಇದೀಗ ರಿಷಬ್ ಶೆಟ್ಟಿ ಅವರನ್ನು ನ್ಯಾಷನಲ್ ಸ್ಟಾರ್ ಆಗಿ ಮಾಡಿದೆ. ಕಾಂತಾರ ಸಿನಿಮಾ ಸೂಪರ್ ಸಕ್ಸಸ್ ಆಗಿದ್ದು ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಇದೀಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ ಶೆಟ್ಟಿಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಿಯಾಮಣಿ ಅಚ್ಚರಿಯ ಮಾಹಿತಿಯೊಂದನ್ನ ನೀಡಿದ್ದಾರೆ.

Thu Feb 16 , 2023
ಬಹುಭಾಷಾ ನಟಿ ಪ್ರಿಯಾಮಣಿ ಸದ್ಯ ಸಿನಿಮಾ ಮತ್ತು ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತಮ್ಮ ಮೊದಲ ಪ್ರೀತಿಯ ಬಗ್ಗೆ ಸಂದರ್ಶನವೊಂದರಲ್ಲಿ ಪ್ರಿಯಾಮಣಿ ಅಚ್ಚರಿಯ ಮಾಹಿತಿಯೊಂದನ್ನ ನೀಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಪ್ರಿಯಾಮಣಿ ಸದ್ಯ ಮುಸ್ತಫಾ ರಾಜ್ ಜೊತೆ ವೈವಾಹಿಕ ಬದುಕಿನಲ್ಲಿ ಖುಷಿಯಾಗಿದ್ದಾರೆ. 2017ರಲ್ಲಿ ಉದ್ಯಮಿ ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೀಗಿರುವಾಗ ಸಂದರ್ಶನವೊಂದರಲ್ಲಿ ಇದೀಗ ತಮ್ಮ ಮೊದಲ ಲವ್ ಲೈಫ್ ಬಗ್ಗೆ […]

Advertisement

Wordpress Social Share Plugin powered by Ultimatelysocial