ಅಡುಗೆ ಅನಿಲವೂ ತುಟ್ಟಿ; 14.2 ಕೆಜಿಯ ಪ್ರತಿ ಸಿಲಿಂಡರ್ ಬೆಲೆಯಲ್ಲಿ 50 ರೂ. ಹೆಚ್ಚಳ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಇಂಧನ ಬೆಲೆಯಲ್ಲಿನ ಏರಿಕೆಗೆ ಅನುಗುಣವಾಗಿ ಎಲ್‌ಪಿಜಿ ಬೆಲೆಯನ್ನು ಭಾನುವಾರ ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಇಂದಿನಿಂದ 14.2 ಕೆಜಿ ಸಬ್ಸಿಡಿ ರಹಿತ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಪ್ರತಿ ಸಿಲಿಂಡರ್ ಬೆಲೆ 999.50 ರೂ. ಆಗಿರಲಿದೆ.

ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಏರಿಕೆಯಾಗುತ್ತಿದ್ದು, ಅದೇ ಸಮಯದಲ್ಲಿ ಗೃಹೋಪಯೋಗಿ ಅನಿಲ ಸಿಲಿಂಡರ್ ಬೆಲೆಯಲ್ಲಿಯೂ ಏರಿಕೆಯಾಗಿದೆ.

ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 2253 ರೂ ನಿಂದ 2355.50 ರೂ. ಗೆ ಹೆಚ್ಚಿಸಲಾಯಿತು (102.50 ರೂ. ಹೆಚ್ಚಳ) ಅಲ್ಲದೆ, 5 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 655 ರೂ.ಗೆ ಹೆಚ್ಚಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂಬೈನ ಎಲ್‌ಐಸಿ ಕಟ್ಟಡದಲ್ಲಿ ಬೆಂಕಿ!

Sat May 7 , 2022
    8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಶನಿವಾರ ಮುಂಜಾನೆ ಕಚೇರಿಯ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಯಾಲರಿ ಸೇವಿಂಗ್ಸ್ ರೂಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕಿಟಕಿಯಿಂದ ಹೊರಗೆ ಸಹ ಬೆಂಕಿಯ ಕೆನ್ನಾಲಿಗೆ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿತು. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ದಾಖಲೆಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ಹತೋಟಿಗೆ ತರುವ ಕಾರ್ಯ […]

Advertisement

Wordpress Social Share Plugin powered by Ultimatelysocial