ಗೃಹ ಬಳಕೆಯ LPG ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ:

ನವದೆಹಲಿ: ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಇಂದು (ಮೇ.19) ಮತ್ತೆ 3.50 ರೂಪಾಯಿ ಹೆಚ್ಚಳವಾಗಿದೆ. ಗೃಹ ಬಳಕೆ ಮಾತ್ರವಲ್ಲದೆ, ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ 8 ರೂಪಾಯಿ ಹೆಚ್ಚಳವಾಗಿದೆ.

ಈ ತಿಂಗಳಲ್ಲಿ ಎರಡನೇ ಬಾರಿಗೆ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.

ಮೇ. 7ರಂದು 50 ರೂಪಾಯಿ ಹೆಚ್ಚಳವಾಗಿತ್ತು. ಇಂದು ಮತ್ತೆ 3.50 ರೂಪಾಯಿ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 999.50 ರೂಪಾಯಿ ಇದ್ದ 14.2 ಕೆಜಿ ತೂಕದ ಸಿಲಿಂಡರ್​ ಬೆಲೆ ಇದೀಗ 1003 ರೂಪಾಯಿ ಆಗಿದೆ. ಕೊಲ್ಕತದಲ್ಲಿ 1029 ರೂ. ಇದ್ದರೆ, ಚೆನ್ನೈನಲ್ಲಿ 1018 ರೂಪಾಯಿಗೆ ತಲುಪಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್​ ದರದಲ್ಲಿ 8 ರೂಪಾಯಿ ಏರಿಕೆ ಆಗಿದ್ದು, ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್ ಈಗ 2,354 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಕೋಲ್ಕತ್ತಾದಲ್ಲಿ 2,454, ಮುಂಬೈನಲ್ಲಿ 2,306 ಮತ್ತು ಚೆನ್ನೈನಲ್ಲಿ 2,507 ರೂ.ಗೆ ಮಾರಾಟವಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಏರಿಕೆಯಾಯ್ತು ಕೊರೊನಾ ಸೊಂಕಿತರ ಸಂಖ್ಯೆ;

Thu May 19 , 2022
  ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,364 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524303 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 15419 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2582 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ […]

Advertisement

Wordpress Social Share Plugin powered by Ultimatelysocial