ಡಿಸಿ ಮನೆ ಆವರಣದಲ್ಲಿ ಶ್ರೀಗಂಧ ಮರ ಕಳವು, ಮಾಲು ಸೇಮತ ಕಳ್ಳ ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲಾ ಅಧಿಕಾರಿಗಳ ಮನೆ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಮಾರುತಿ ತಂದೆ ಯಮನಪ್ಪ ಕಟ್ಟಿಮನಿ(31) ಬಂಧಿತ ಆರೋಪಿಯಾಗಿದ್ದು, ಆರೋಪಿಯನ್ನು ಮಾಲು ಸಮೇತ ಧಾರವಾಡ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಧಾರವಾಡ ಶಹರದಲ್ಲಿರುವ ಜಿಲ್ಲಾಧಿಕಾರಿಗಳ ವಸತಿಗೃಹ ಆವರಣದಲ್ಲಿನ ಒಂದು ಶ್ರೀಗಂಧದ ಮರ ಮತ್ತು ಗುಂಗರಗಟ್ಟಿ ಶ್ರೀಗಂಧದ ನೇಡುತೋಪಿನಲ್ಲಿರುವ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳನ್ನಾಗಿ ಪರಿವರ್ತಿಸಿ, ಸುಮಾರು ಒಂದು ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುವ ಸಮಯದಲ್ಲಿ ಮಾಲು ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮತ್ತು ಕಳ್ಳತನದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೌರಭಕುಮಾರ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ ಹಾಗೂ ಉಪ ವಲಯ ಅರಣ್ಯಧಿಕಾರಿಗಳಾದ ಎಮ್.ಎಮ್.ತಲ್ಲೂರ, ಸಿ.ಎಸ್.ರೊಟ್ಟಿ, ಯಲ್ಲನಾಯಕ ಹಮಾಣಿ, ಅರಣ್ಯ ರಕ್ಷಕರಾದ ಭರತೇಶ ಮಗದುಮ್, ಚಾಂದಭಾಷಾ ಮುಲ್ಲಾ, ಕಲ್ಲಪ್ಪ , ಬಸಪ್ಪ ಕರಡಿ, ಶಾರೂನ್.ಎಸ್,.ಮಾರುತಿ ಎಣ್ಣಿ, ಶಿವಾನಂದ ಕೊಂಡಿಕೊಪ್ಪ, ಪರಶುರಾಮ ಗಾಡಿವಡ್ಡರ ಹಾಗೂ ಅಲ್ತಾಫ ಮುಲ್ಲಾ ಪೊಲೀಸ್ ನೀರಿಕ್ಷಕರು ಹಾಗೂ ಎನ್.ಎಚ್.ಸಾಳುಂಕೆ ಎ.ಎಸ್.ಐ,. ಡಿ.ಎನ್. ಗುಂಡಗೈ, ಎಸ್.ಎಚ್. ಕೆಂಪೋಡಿ, ಸಿ.ಸಿ.ಬಿ, ಧಾರವಾಡ, ಸಿಬ್ಬಂದಿಯವರು ದಾಳಿಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ಬಜೆಟ್‌ | ಮೈಸೂರು: ನಿರೀಕ್ಷೆ ಬೆಟ್ಟದಷ್ಟು; ಸಿಕ್ಕಿದ್ದು ಸಾಸಿವೆಯಷ್ಟು!

Sat Mar 5 , 2022
ಮೈಸೂರು: ರಾಜ್ಯ ಬಜೆಟ್‌ ಮೇಲೆ ಸಾಂಸ್ಕೃತಿಕ ನಗರಿ ಇರಿಸಿದ್ದ ಬೆಟ್ಟದಷ್ಟು ನಿರೀಕ್ಷೆಯಲ್ಲಿ ಕೆಲವಾದರೂ ಸಿಕ್ಕಿವೆ. ಮಹತ್ವದ ಯೋಜನೆಗಳಾದ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ, ಮೈಸೂರು- ಚೆನ್ನೈ ಹೈಸ್ಪೀಡ್‌ ರೈಲು ಯೋಜನೆ, ಚಾಮುಂಡಿಬೆಟ್ಟಕ್ಕೆ ರೋಪ್‌ವೇಯಂಥ ಆಕರ್ಷಕ ಹಾಗೂ ಮಹತ್ವದ ಕೊಡುಗೆಗಳು ಲಭಿಸಿವೆ.ಸ್ಟಾರ್ಟ್ ಅಪ್‌ ಕ್ಲಸ್ಟರ್‌ಗಳ ರಚನೆ, ಅಗರಬತ್ತಿ ತಯಾರಿಕೆ ಕುರಿತು ಮೈಕ್ರೊ ಕ್ಲಸ್ಟರ್‌ಗಳ ರಚನೆಯಂತಹ ಬೆರಳೆಣಿಕೆಯಷ್ಟು ಕೊಡುಗೆಗಳು ಮಾತ್ರವೇ ಕೈಗಾರಿಕಾ ಕ್ಷೇತ್ರಕ್ಕೆ ದಕ್ಕಿವೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೈಸೂರು- ಶ್ರೀರಂಗಪಟ್ಟಣ- ಹಾಸನ- ಬೇಲೂರು- ಹಳೇಬೀಡು […]

Advertisement

Wordpress Social Share Plugin powered by Ultimatelysocial